ನಾಪೋಕ್ಲು, ನ. ೭: ಮಡಿಕೇರಿ ಅಂಬೇಡ್ಕರ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಣಿ ಅಪ್ಪಣ್ಣ ಪೇರೂರು ಅವರನ್ನು ಆಯ್ಕೆ ಮಾಡಲಾಗಿದೆ.
ಕೊಡಗು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಇ. ಜಯಂದ್ರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಕಾನೂನು ಘಟಕದ ರಾಜ್ಯ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಕಾಂಗ್ರೆಸ್ ಮುಖಂಡರಾದ ಮಂಥರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಿ.ಬಿ ಸತೀಶ್, ವಿ.ಪಿ. ಶಶಿಧರ್ ಮೀದೇರಿರ ನವೀನ್, ಇಸ್ಮಾಯಿಲ್ ನಾಪೋಕ್ಲು, ಹಂಸ ಕೊಟ್ಟಮುಡಿ ಇದ್ದರು.