ಕುಶಾಲನಗರ, ನ.೭: ಕುಶಾಲನಗರ ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರವನ್ನು ತಾ. ೮ ರಿಂದ (ಇಂದಿನಿAದ) ಮುಂದಿನ ಆದೇಶ ತನಕ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಕಾವೇರಿ ನಿಸರ್ಗಧಾಮಕ್ಕೆ ತೆರಳುವ ತೂಗು ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ತೂಗು ಸೇತುವೆಯ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿದೆ ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ತಿಳಿಸಿದ್ದಾರೆ.