ಮಡಿಕೇರಿ, ನ. ೭: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ೨೦೨೨-೨೩ ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ‘ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ’ಯಡಿ ಸರ್ಕಾರಿ, ಖಾಸಗಿ, ಅನುದಾನಿತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ದಾಖಲಾತಿಗಳೊಂದಿಗೆ ತಾ. ೧೫ ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿ, ಮೌಲಾನಾ ಆಜಾದ್ ಭವನ, ಎಫ್ಎಂಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸಲ್ಲಿಸಬೇಕು.
ಯಾವುದೇ ಇಲಾಖೆಯ ಸರ್ಕಾರಿ/ ಸರ್ಕಾರಿ ಅನುದಾನಿತ ವಿದ್ಯಾರ್ಥಿ ನಿಲಯ/ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದೆ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ಜಿಲ್ಲೆಯ ಜಿಲ್ಲಾ ಅಧಿಕಾರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಕುಟುಂಬದ ಆದಾಯ ಮಿತಿಯು ಪ್ರವರ್ಗ-೧ ಕ್ಕೆ ೨.೫೦ ಲಕ್ಷ ಹಾಗೂ ಪ್ರವರ್ಗ-೨ಎ (ಬೌದ್ಧ), ಪ್ರವರ್ಗ-೨ಬಿ (ಮುಸ್ಲಿಂ) ಮತ್ತು ಪ್ರವರ್ಗ-೩ (ಕ್ರಿಶ್ಚಿಯನ್) ವರ್ಗಗಳಿಗೆ ರೂ.೨ ಲಕ್ಷ ಮಿತಿಯೊಳಗಿರಬೇಕು.
ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ (ವಾರ್ಷಿಕ/ ೨ ಸೆಮಿಸ್ಟರ್), ವಿದ್ಯಾರ್ಥಿಯ ಜಾತಿ ಮತ್ತು ಕುಟುಂಬದ ಆದಾಯ ಪ್ರಮಾಣ ಪತ್ರ (ತಹಶೀಲ್ದಾರರಿಂದ), ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಪ್ರಸಕ್ತ ವರ್ಷದ ಶುಲ್ಕ ರಶೀತಿ, ಮಾಹೆವಾರು ಹಾಜರಾಗಿ ಪಟ್ಟಿ ಕಡ್ಡಾಯವಾಗಿ, ಕಾಲೇಜಿಗಿರುವ ದೂರದ ಬಗ್ಗೆ ದೃಢೀಕರಣ (ಸಂಬAಧಪಟ್ಟ ಪಂಚಾಯಿತಿ/ಪ.ಪA./ನಗರಸಭೆಯಿAದ). ಅಗತ್ಯ ಮಾಹಿತಿಗೆ ಇಲಾಖಾ ವೆಬ್ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ/ಞoಜಚಿgu/ಠಿubಟiಛಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್ಎಂಸಿ, ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ.ಸಂ.೦೮೨೭೨-೨೨೫೫೨೮/ ೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಮತ ಅವರು ತಿಳಿಸಿದ್ದಾರೆ.