ಮಡಿಕೇರಿ, ನ. ೭ : ಸಂಪಾಜೆ ಗ್ರಾಮದ ಸರ್ವೇ ನಂಬರ್ ೫೪/೧ ರಲ್ಲಿ ೧.೫೦ ಎಕರೆ ಜಾಗವನ್ನು ಸೆಸ್ಕ್ ವಿಭಾಗಕ್ಕೆ ಜಾಗ ಕಾಯ್ದಿರಿಸಿ ಜಿಲ್ಲಾಧಿಕಾರಿ ಅವರ ಆದೇಶದಂತೆ ಭೂ ದಾಖಲೆಗಳ ಸಹಾಯಕ ನಿರ್ದೇಶಕ ವಿರೂಪಾಕ್ಷ, ತಹಶೀಲ್ದಾರ್ ಪಿ.ಎಸ್. ಮಹೇಶ್, ಸೆಸ್ಕ್ ಎಇ ನಾಗೇಶ್, ಭೂ ದಾಖಲೆಗಳ ಇಲಾಖೆಯ ಮೇಲ್ವಿಚಾರಕ ಸಣ್ಣಸ್ವಾಮಿ, ಕಂದಾಯ ನಿರೀಕ್ಷಕ ವೆಂಕಟೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಉಪಾಧ್ಯಾಯರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರ ಸಮ್ಮುಖದಲ್ಲಿ ಸರ್ವೇ ಕಾರ್ಯ ನಡೆಸಿ, ಗಡಿ ಗುರುತಿಸಲಾಯಿತು.

ಈ ಸಂದರ್ಭದಲ್ಲಿ ಭೂಮಾಪಕರು, ಉಪ ತಹಶೀಲ್ದಾರ್ ಹಾಗೂ ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.