ಮಡಿಕೇರಿ, ನ. ೭: ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶೀಲಾ ಅಬ್ವುಲ್ಲ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಿಕ್ಷಕಿಯರಾದ ಕವಿತಾ ಮತ್ತು ಶ್ರುತಿ ಅವರು ದಿನದ ಮಹತ್ವದ ಕುರಿತು ಮಾತನಾಡಿದರು.ಫ್ರೆಂಡ್ಸ್ ವಾಹನ ಮಾಲಿಕರ ಹಾಗೂ ಚಾಲಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೂರ್ನಾಡುವಿನಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ಸಂಘದ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ರಕ್ತದಾನ ಮಾಡಿದರು. ಈ ಸಂದರ್ಭ ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಚಂದ್ರಶೇಖರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಕೇಶವ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸದಸ್ಯರು, ಸಂಘದ ಅಧ್ಯಕ್ಷ ಅಬೂಬಕ್ಕರ್ ಪಿ.ಕೆ., ಕಾರ್ಯದರ್ಶಿ ಶಶಿ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ಕುಶಾಲನಗರ : ಇಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಾರಿಗೆ ಬಸ್ ನಿಲ್ದಾಣದ ಬಳಿಯ ಆಟೋ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ. ಜೈವರ್ಧನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ನೇತ್ರದಾನ ನೋಂದಣಿ, ರಕ್ತದಾನ ನೋಂದಣಿ, ಆಯುಷ್ಮಾನ್ ಕಾರ್ಡ್ ನೋಂದಣಿ, ರಕ್ತ ಪರೀಕ್ಷೆ, ಕಫ ಪರೀಕ್ಷೆ ಶಿಬಿರ ನಡೆಯಿತು.

ಜಿಪಂ ಮಾಜಿ ಸದಸ್ಯ ವಿ.ಪಿ.ಶಶಿಧರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸುರಯ್ಯಭಾನು, ಸದಸ್ಯರಾದ ಶೇಖ್ ಕಲೀಮುಲ್ಲಾ, ಪ್ರಮೋದ್ ಮುತ್ತಪ್ಪ, ಮಾಜಿ ಸದಸ್ಯ ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್, ಆಟೋ ಚಾಲಕರು ಮಾಲೀಕರ ಸಂಘದ ಅಧ್ಯಕ್ಷ ಮೋಹನ್, ಮಾಜಿ ಅಧ್ಯಕ್ಷ ಚಂದ್ರು, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ.ಶಾಂತಿ ಮತ್ತಿತರರು ಇದ್ದರು.