ಮಡಿಕೇರಿ, ನ.೮: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ವನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಕೈಗೊಳ್ಳ ಲಾಗಿದ್ದು, ಈ ಸಂಬAಧ ಕರಡು ಮತದಾರರ ಪಟ್ಟಿಯ ಪ್ರತಿಯನ್ನು ತಾ. ೯ ರಂದು (ಇಂದು) ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆ ತಾ.೯ ರಂದು ಬೆಳಗ್ಗೆ ೧೦.೧೫ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಹೇಳಿದರು.

ಜಾಥಾವು ಗಾಂಧಿ ಮೈದಾನ ದಿಂದ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತ ಮಾರ್ಗ ಗಾಂಧಿ ಮೈದಾನಕ್ಕೆ ಬರಲಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ೧೮ ವರ್ಷ ಪೂರ್ಣ ಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗಿರಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಅರಿವು ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ೧೮ ವರ್ಷ ಪೂರ್ಣ ಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಈಗಾಗಲೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಖಾತರಿಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆ ಸಂಬAಧ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮತದಾನ ಆಗುವ ನಿಟ್ಟಿನಲ್ಲಿ ೧೮ ವರ್ಷ ಪೂರ್ಣಗೊಂಡವರ ಎಲ್ಲರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರಬೇಕು ಎಂದು ಅವರು ವಿವರಿಸಿದರು. ಜಿಲ್ಲಾ ಪಂಚಾಯಿತಿ ಸಿಇಓ ಡಾ. ಎಸ್. ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.