ಮಡಿಕೇರಿ, ನ. ೮: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವು ತಾ. ೧೦ ರಂದು ಮಧ್ಯಾಹ್ನ ೨ ಗಂಟೆಗೆ ‘ಉತ್ಥಾನ’ ಎಂಬ ಶೀರ್ಷಿಕೆಯಡಿಯಲ್ಲಿ ಎ ಬ್ಲಾಕ್ ಸಭಾಂಗಣದಲ್ಲಿ ನಡೆಯಲಿದೆ.
ಕವಿ, ಲೇಖಕರು ಹಾಗೂ ಸಂಗೀತಗಾರರಾದ ಹೆಚ್. ಡುಂಡಿರಾಜ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕೆ.ಬಿ. ಕಾರ್ಯಪ್ಪ, ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ. ರೂಪೇಶ್ ಗೋಪಾಲ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ನಂಜುAಡಯ್ಯ, ಮುಖ್ಯ ಆಡಳಿತ ಅಧಿಕಾರಿ ಡಾ. ನಂಜುAಡೇಗೌಡ, ಆರ್ಥಿಕ ಸಲಹೆಗಾರ ಕೆ. ಆನಂದ ಇತರರು ಪಾಲ್ಗೊಳ್ಳಲಿದ್ದಾರೆ.