ಮಡಿಕೇರಿ, ನ.೯: ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಕೈಗೊಳ್ಳಲಾಗಿದ್ದು, ಈ ಸಂಬAಧ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪ್ರಕಟಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ನಡೆದ ಸಭೆಯ ಸಂದರ್ಭದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದರು.
ಭಾರತ ಚುನಾವಣಾ ಆಯೋಗವು ಪ್ರತಿ ವರ್ಷದಂತೆ ಈ ವರ್ಷವೂ ೧೮ ವರ್ಷ ಪೂರ್ಣ ಗೊಂಡವರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯ ಕೈಗೊಂಡಿದ್ದು, ಈ ಸಂಬAಧ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಆ ದಿಸೆಯಲ್ಲಿ ಡಿಸೆಂಬರ್ ೮ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಹರಿಗೆ ಅವಕಾಶ ಮಾಡಿದೆ. ಆ ನಿಟ್ಟಿನಲ್ಲಿ ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್, ೦೧ ರಂದು ೧೮ ವರ್ಷ ಪೂರ್ಣಗೊಳ್ಳುವ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್, ೦೧, ೨೦೨೩ ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ ಮತ್ತು ಯುವತಿಯರು ಹಾಗೂ ೧೮ ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ಇದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-೬ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಯಾಗಿರುವ ಮತದಾರರು ಮೃತಪಟ್ಟಿದ್ದಲ್ಲಿ, ಸ್ಥಳಾಂತರ ಗೊಂಡಿದ್ದಲ್ಲಿ ಅಥವಾ ಪುನರಾವರ್ತನೆ ಆಗಿದ್ದಲ್ಲಿ ನಮೂನೆ ೭ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆ ನಿಟ್ಟಿನಲ್ಲಿ ವಿವಿಧ ಪಕ್ಷಗಳ ಪ್ರಮುಖರು ತಮ್ಮ ತಮ್ಮ ವಾರ್ಡ್ ಮತ್ತು ಗ್ರಾಮಗಳಲ್ಲಿ ಈ ಬಗ್ಗೆ ಗಮನಹರಿಸಬೇಕಿದೆ.
ಮತದಾರರ ನಿವಾಸ ಬದಲಾವಣೆ, ಪ್ರಸ್ತುತ ಮತದಾರರ ಪಟ್ಟಿಯಲ್ಲಿ
(ಮೊದಲ ಪುಟದಿಂದ) ನಮೂದುಗಳ ತಿದ್ದುಪಡಿಗಾಗಿ, ಬದಲಿ ಮತದಾರರ ಗುರುತಿನ ಚೀಟಿ ನೀಡುವುದು ಮತ್ತು ವಿಕಲಚೇತನರ ಗುರುತಿಸುವುದಕ್ಕೆ ನಮೂನೆ ೮ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ ೬ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ನವೆಂಬರ್ ೯ ರಿಂದ ಡಿಸೆಂಬರ್ ೮ ರವರೆಗೆ ಆಯಾಯ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬAಧಪಟ್ಟ ತಾಲೂಕು ಕಚೇರಿಗಳಿಗೆ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಮತದಾರರೇ hಣಣಠಿs://ತಿತಿತಿ.ಟಿvsಠಿ.iಟಿ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಮತ್ತು hಣಣಠಿs://voಣeಡಿಠಿoಡಿಣಚಿಟ.eಛಿi.gov.iಟಿ ಮತ್ತು ವಿಎಚ್ಎ ಮೊಬೈಲ್ ಆ್ಯಪ್ ಮೂಲಕ ನಮೂನೆ ೬ಎ, ನಮೂನೆ ೭ ಮತ್ತು ನಮೂನೆ ೮ ನ್ನು ಸಲ್ಲಿಸಬಹುದಾಗಿದೆ ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬAಧ ಇದೇ ನವೆಂಬರ್, ೧೨, ೨೦, ಡಿಸೆಂಬರ್, ೦೩ ಮತ್ತು ೦೪ ರಂದು ಜಿಲ್ಲೆಯ ೫೪೨ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ೧೮ ವರ್ಷ ಮೇಲ್ಪಟ್ಟವರೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
ಹಾಗೆಯೇ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ನೋಂದಣಿಯಾಗದೆ ಇದ್ದಲ್ಲಿ ನಮೂನೆ ೬ ರಲ್ಲಿ ಅರ್ಜಿಯನ್ನು ಸ್ಥಳದಲ್ಲಿಯೇ ನೀಡಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಇದೇ ಜನವರಿ ೫ ರಂದು ಪ್ರಕಟಿಸಲಾಗುವುದು.
೨೦೨೩ ರ ಏಪ್ರಿಲ್, ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ೧೮ ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಲು ಸುವರ್ಣ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.
೪,೩೯,೦೩೯ ಮತದಾರರು
ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೪,೩೯,೦೩೯ ಮತದಾರರಿದ್ದು, ೨,೧೭,೩೪೯ ಪುರುಷ ಮತ್ತು ೨,೨೧,೬೭೧ ಮಹಿಳಾ ಮತದಾರರು, ಹಾಗೆಯೇ ೧೯ ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೨೩,೪೧೨ ಮತದಾರರು ಇದ್ದು, ೧,೦೯,೯೫೨ ಪುರುಷ ಮತ್ತು ೧,೧೩,೪೫೨ ಮಹಿಳಾ ಮತದಾರರು ಹಾಗೆಯೇ ೮ ಇತರೆ ಮತದಾರರು, ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨,೧೫,೬೨೭ ಮತದಾರರು ಇದ್ದು, ೧,೦೭,೩೯೭ ಪುರುಷ ಮತ್ತು ೧,೦೮,೨೧೯ ಮಹಿಳಾ ಮತದಾರರು, ಹಾಗೆಯೇ ೧೧ ಇತರ ಮತದಾರರು ಇದ್ದಾರೆ ಮಾಹಿತಿ ನೀಡಿದರು. ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕಾರ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ಶೇ.೭೫.೪೩ ರಷ್ಟು ಪ್ರಗತಿ ಸಾಧಿಸಿದೆ ಎಂದು ಅವರು ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ ೧೮ ವರ್ಷ ಪೂರ್ಣಗೊಂಡ ಯುವ ಮತದಾರರು ಜಿಲ್ಲೆಯ ೨೪ ಮತಗಟ್ಟೆಯಲ್ಲಿ ಯುವ ಪುರುಷರು ಮತ್ತು ೧೯ ಮತಗಟ್ಟೆಯಲ್ಲಿ ಯುವ ಮಹಿಳಾ ಮತದಾರರು ೪ ಮತಗಟ್ಟೆಯಲ್ಲಿ ಯುವ ಪುರುಷ ಮತ್ತು ಮಹಿಳೆಯರು ಒಬ್ಬರೂ ಸಹ ತಮ್ಮ ಹೆಸರು ನೋಂದಣಿ ಮಾಡದಿರುವ ಬಗ್ಗೆ ಮಾಹಿತಿ ಇದೆ. ಆ ನಿಟ್ಟಿನಲ್ಲಿ ವಿವಿಧ ಪಕ್ಷಗಳ ಪ್ರಮುಖರು ಯುವ ಮತದಾರರ ಹೆಸರು ನೋಂದಣಿಗೆ ಕೈಜೋಡಿಸಬೇಕು.
೧೮ ವರ್ಷ ಪೂರ್ಣಗೊಂಡವರು ಎಲ್ಲರೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಉತ್ಸಾಹ ತೋರಬೇಕು. ಆ ನಿಟ್ಟಿನಲ್ಲಿ ವಿವಿಧ ಪಕ್ಷಗಳ ಮುಖಂಡರು ಸಹ ಮಾಹಿತಿ ನೀಡಬೇಕು, ಅಭಿಯಾನ ಸಂದರ್ಭದಲ್ಲಿ ಮನೆ ಮನೆಗೆ ಬಿಎಲ್ಒಗಳು ಭೇಟಿ ನೀಡಿದಾಗ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಸ್ಥಳಾಂತರ, ತೆಗೆಯುವುದು ಮತ್ತಿತರ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು.
ತೆನ್ನಿರಾ ಮೈನಾ ಅವರು ಮಾತನಾಡಿ ಮೃತಪಟ್ಟವರನ್ನು ಮತದಾರರ ಪಟ್ಟಿಯಿಂದ ತೆಗೆಯುವಂತಾಗಬೇಕು ಎಂದು ಸಲಹೆ ಮಾಡಿದರು. ಅಪ್ಪಣ್ಣ ಮಾತನಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಸ್ಥಳಾಂತರ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.