ಮಡಿಕೇರಿ, ನ. ೯: ನಗರದ ಆಂಜನೇಯ ದೇವಸ್ಥಾನದ ಸಮೀಪದಲ್ಲಿರುವ ಓಂಕಾರ್ ಆಟೋ ಸ್ನೇಹಿತರ ಬಳಗದ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅನೂಪ್ ಮಾದಪ್ಪ ಅವರಿಗೆ ಸ್ನೇಹಿತರ ಬಳಗದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಬಳಿಕ ‘ಕರ್ನಾಟಕ ಪ್ರಶಸ್ತಿ’ ಪಡೆದ ದಿ. ಡಾ. ಪುನಿತ್ ರಾಜ್‌ಕುಮಾರ್ ಅವರ ಸ್ಮರಣೆಯೊಂದಿಗೆ, ಆಂಜನೇಯ ದೇವಸ್ಥಾನದಲ್ಲಿ ಶಾಂತಿ ಪೂಜೆ ನಡೆಸಿ, ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.