ಮಡಿಕೇರಿ, ನ. ೮: ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಶನಿವಾರಸಂತೆ ಸುಳುಗಳಲೆ ಗ್ರಾಮದ ಎಸ್.ಎಸ್. ಶಿವಾನಂದ ಅವರನ್ನು ನೇಮಕಗೊಳಿಸಿ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ ತೆನ್ನಿರ ಮೈನ ಆದೇಶ ಹೊರಡಿಸಿದ್ದಾರೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಸಿ. ನಾರಾಯಣ ಸ್ವಾಮಿ ಹಾಗೂ ರಾಜ್ಯ ಸಂಚಾಲಕ ವಿಜಯಸಿಂಗ್ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮತ್ತು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಅವರ ಶಿಫಾರಸ್ಸನ್ನು ಪರಿಗಣಿಸಿ ನೇಮಕಾತಿ ಮಾಡಲಾಗಿದೆ.