ಸೋಮವಾರಪೇಟೆ, ನ. ೯: ಸುಮಾರು ೧೫ ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಗಿರುವ ತಾಲೂಕು ಪಂಚಾಯಿತಿ ಕಟ್ಟಡ, ಗ್ರಂಥಾಲಯ, ಕಾರ್ಯ ನಿರ್ವಾಹಕಾಧಿಕಾರಿಗಳ ಕಚೇರಿ, ಮಾಹಿತಿ ಕೇಂದ್ರವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂ. ೮ ಲಕ್ಷ ವೆಚ್ಚದಲ್ಲಿ ಸಿಬ್ಬಂದಿಗಳಿಗೆ ನವೀಕೃತಗೊಳಿಸಲಾದ ಕಚೇರಿ ಕಟ್ಟಡ, ೩ ಲಕ್ಷ ವೆಚ್ಚದ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ರೂ. ೪ ಲಕ್ಷ ವೆಚ್ಚದಲ್ಲಿ ನವೀಕರಣಗೊಂಡಿರುವ ಕಾರ್ಯನಿರ್ವಹಕಾಧಿಕಾರಿಗಳ ಕಚೇರಿಯನ್ನು ಶಾಸಕರು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿ ವರ್ಗದ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳಿಗೂ ಸುಸಜ್ಜಿತ ಕಚೇರಿಗಳನ್ನು ಒದಗಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ.
ಈ ಹಿನ್ನೆಲೆ ಸೋಮವಾರಪೇಟೆ ತಾಲೂಕು ಕಚೇರಿ ನವೀಕರಣಕ್ಕೆ ಅನುದಾನ ಒದಗಿಸಿ, ಕಚೇರಿಯನ್ನು ನವೀಕರಣ ಗೊಳಿಸಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬರಹಿತವಾಗಿ ಮಾಡಿಕೊಡು ವಂತಾಗಬೇಕು ಎಂದರು.
ಈಗಾಗಲೇ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆಯಾಗಿದ್ದು, ಜಿಲ್ಲಿಯಲ್ಲಿ ಇದೇ ಪ್ರಥಮವಾಗಿ ಸೋಮವಾರಪೇಟೆ ತಾಲೂಕು ಪಂಚಾಯಿತಿಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ರಂಜನ್ ಕರೆ ನೀಡಿದರು.
ಈ ಸಂದರ್ಭ ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ಜಯಣ್ಣ, ಎನ್ಆರ್ಇಜಿ ಸಹಾಯಕ ನಿರ್ದೇಶಕ ರವೀಶ್, ವ್ಯವಸ್ಥಾಪಕ ರವೀಂದ್ರ, ಸಾಮಾಜಿಕ ಲೆಕ್ಕಪರಿಶೋಧಕ ದಿನೇಶ್ ಸೇರಿದಂತೆ ವಿವಿಧ ಇಲಾಖಾಧಿ ಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.