ಮುಳ್ಳೂರು, ನ. ೯: ಸಮೀಪದ ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾ. ೧೧ ರಂದು ಬೆಳಿಗ್ಗೆ ೧೦ ಗಂಟೆಯಿAದ ಶಾಲೆಯ ಯುಕೆಜಿಯಿಂದ ೧೦ನೇ ತರಗತಿವರೆಗಿನ ವಿದ್ಯಾರ್ಥಿಗಳ ಮೊದಲ ಸೆಮಿಸ್ಟ್ ಪರೀಕ್ಷೆ ಅಂಕಪಟ್ಟಿ ವಿತರಣೆ ಹಾಗೂ ಶಾಲೆಯ ೫ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಂದ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.