ಪೊನ್ನಂಪೇಟೆ, ನ. ೯: ಬೆಂಗಳೂರಿನ ಅಂರ‍್ರಾಷ್ಟಿçÃಯ ವಿಮಾನ ನಿಲ್ದಾಣದ ಆವರಣದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ನಾಡಪ್ರಭು ಕೆಂಪೇಗೌಡ ಅವರ ಬೃಹತ್ ಪ್ರತಿಮೆಯ ಕೆಳಗೆ ತುಂಬಿಸಲು ರಾಜ್ಯಾದ್ಯಂತ ಮಣ್ಣು ಸಂಗ್ರಹಿಸುವ ಕೆಂಪೇಗೌಡರ ರಥಯಾತ್ರೆಗೆ ಕೋತೂರಿನಲ್ಲಿ ಸ್ವಾಗತ ಕೋರಲಾಯಿತು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಕೆಂಪೇಗೌಡರ ರಥ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತಿದ್ದಂತೆ ಕೋತೂರಿನ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಥಕ್ಕೆ ಸ್ವಾಗತ ಕೋರಿ ಮುಂದಕ್ಕೆ ಬೀಳ್ಕೊಡಲಾಯಿತು.

ಕೋತೂರಿನಲ್ಲಿ ರಥವನ್ನು ಸ್ವಾಗತಿಸಿದ ಸಂದರ್ಭ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಸೇರಿದಂತೆ ಸಂಘದ ಪದಾಧಿ ಕಾರಿಗಳು, ಸದಸ್ಯರು ಮತ್ತು ಕುಟುಂಬ ವರ್ಗದವರು ಉಪಸ್ಥಿತರಿದ್ದರು.