ಮುಳ್ಳೂರು, ನ. ೯: ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಪ್ರಯುಕ್ತ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು ತಾ. ೧೨ ರಂದು ಬೆಳಿಗ್ಗೆ ೧೦ ಗಂಟೆಯಿAದ ಸುಪ್ರಜ ಗುರುಕುಲ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಎಂದು ಜಾನಪದ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಪರ್ಧಾ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ (ನಗದು ಮತ್ತು ಪುಸ್ತಕ) ನೀಡಲಾಗುತ್ತಿದ್ದು ಸ್ಪರ್ಧಾ ವಿಜೇತ ಮಕ್ಕಳಿಗೆ ತಾ. ೧೪ ರ ಮಕ್ಕಳ ದಿನಾಚರಣೆ ದಿನದಂದು ಸುಪ್ರಜ ಗುರುಕುಲ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಡಿ. ಸುಜಲಾದೇವಿ ಮೊ. ೯೧೪೧೬೯೨೫೫೬ ಅವರನ್ನು ಸಂಪರ್ಕಿಸಲು ಕೋರಿದೆ.