ಐಸಿಸಿ ಟಿ೨೦ ವಿಶ್ವಕಪ್: ಪಾಕಿಸ್ತಾನ ಫೈನಲ್ಗೆ ಲಗ್ಗೆ
ಸಿಡ್ನಿ, ನ. ೯: ನ್ಯೂಜಿಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಪಾಕಿಸ್ತಾನ ಐಸಿಸಿ ಟಿ೨೦ ವಿಶ್ವಕಪ್ ಫೈನಲ್ಗೆ ಪ್ರವೇಶಿಸಿದೆ. ಸಿಡ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನೀಡಿದ್ದ ೧೫೩ ರನ್ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ಇನ್ನು ೫ ಎಸೆತ ಬಾಕಿ ಇರುವಂತೆ ೧೫೩ ರನ್ ಪೇರಿಸಿ ಗೆಲುವಿನ ನಗೆ ಬೀರಿದೆ. ಪಾಕಿಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಾಂ ಅತ್ಯುತ್ತಮ ಆರಂಭ ಒದಗಿಸಿಕೊಟ್ಟರು. ಮೊಹಮ್ಮದ್ ರಿಜ್ವಾನ್ ೫೭ ರನ್ ಬಾರಿಸಿದರೆ ಬಾಬರ್ ಅಜಾಂ ೫೩ ರನ್ಗಳಿಸಿ ಔಟಾದರು. ನಂತರ ಬಂದ ಮೊಹಮ್ಮದ್ ಹ್ಯಾರಿಸ್ ೩೦ ಹಾಗೂ ಶಾನ್ ಮಸೂದ್ ಅಜೇಯ ೩ ರನ್ ಬಾರಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ನಿಗದಿತ ಓವರ್ನಲ್ಲಿ ೪ ವಿಕೆಟ್ ನಷ್ಟಕ್ಕೆ ೧೫೨ ರನ್ ಪೇರಿಸಿತ್ತು. ನ್ಯೂಜಿಲ್ಯಾಂಡ್ ಪರ ಫಿನ್ ಅಲೆನ್ ೪, ಡೆವೊನ್ ಕಾನ್ವೇ ೨೧, ಕೇನ್ ವಿಲಿಯಮ್ಸನ್ ೪೬, ಗ್ಲೆನ್ ಫಿಲಿಪ್ಸ್ ೬ ಡೇರಿಲ್ ಮಿಚೆಲ್ ಅಜೇಯ ೫೩ ಜೇಮ್ಸ್ ನೀಶಮ್ ಅಜೇಯ ೧೬ ರನ್ ಪೇರಿಸಿದರು. ಪಾಕ್ ಪರ ಬೌಲಿಂಗ್ನಲ್ಲಿ ಶಾಹೀನ್ ಶಾ ಆಫ್ರಿದಿ ೨ ಮತ್ತು ಮೊಹಮ್ಮದ್ ನವಾಜ್ ೧ ವಿಕೆಟ್ ಪಡೆದರು.
ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ
ಬೆಂಗಳೂರು, ನ. ೯: ಹಿಂದೂ ಪದ ಪರ್ಷಿಯನ್ ಪದ ಅದು ಅಶ್ಲೀಲ. ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಇದೀಗ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದು ವಿಷಾದ ವ್ಯಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಿಜೆಪಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರೇ ಈ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ನಿನ್ನೆಯವರೆಗೂ ತಮ್ಮ ಹೇಳಿಕೆಗೆ ಬದ್ಧ ಎಂದು ಹೇಳುತ್ತಿದ್ದ ಸತೀಶ್ ಜಾರಕಿಹೊಳಿ ಅವರು ಇದೀಗ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರಿನಲ್ಲಿ ವಕೀಲ ದಿಲೀಪ್ ಕುಮಾರ್ ಎಂಬವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ೮ನೇ ಎಸಿಎಂಎA ಕೋರ್ಟ್ನಲ್ಲಿ ದಿಲೀಪ್ ಖಾಸಗಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ ೬ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು ಈ ಹೇಳಿಕೆ ನೀಡಿದ್ದರು. ಸತೀಶ್ ಜಾರಕಿಹೊಳಿಯವರು ಕೂಡಲೇ ಜನರ ಕ್ಷಮೆ ಕೇಳಬೇಕೆಂದು ಬಿಜೆಪಿ ನಾಯಕರು ತೀವ್ರ ಪಟ್ಟು ಹಿಡಿದಿದ್ದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.
ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವAತೆ ಯುಕೆ ಹೈಕೋರ್ಟ್ ಆದೇಶ
ಲಂಡನ್, ನ. ೯: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ)ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವAತೆ ಲಂಡನ್ನ ಹೈಕೋರ್ಟ್ ಬುಧವಾರ ಆದೇಶಿಸಿದೆ. ಈ ವರ್ಷದ ಆರಂಭದಲ್ಲಿ ಮೇಲ್ಮನವಿ ವಿಚಾರಣೆಯ ಅಧ್ಯಕ್ಷತೆ ವಹಿಸಿದ್ದ ಲಾರ್ಡ್ ಜಸ್ಟೀಸ್ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರು ಈ ತೀರ್ಪು ನೀಡಿದ್ದಾರೆ. ಆಗ್ನೇಯ ಲಂಡನ್ನ ವಾಂಡ್ಸ್ವರ್ತ್ ಜೈಲಿನಲ್ಲಿರುವ ೫೧ ವರ್ಷದ ಉದ್ಯಮಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವAತೆ ಕಳೆದ ಫೆಬ್ರವರಿಯಲ್ಲಿ ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶಿಸಿತ್ತು. ಈ ತೀರ್ಪಿನ ವಿರುದ್ಧ ನೀರವ್ ಮೋದಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಯುಕೆ ಹೈಕೋರ್ಟ್ ವಜಾಗೊಳಿಸಿದೆ. ನೀರವ್ ಮೋದಿ ಅವರ ಮಾನಸಿಕ ಸ್ಥಿತಿಯ ಬಗ್ಗೆ ನಾವು ಸಾಕಷ್ಟು ತೃಪ್ತಿ ಹೊಂದಿದ್ದೇವೆ. ಅವರನ್ನು ಗಡಿಪಾರು ಮಾಡುವುದು ಅನ್ಯಾಯ ಅಥವಾ ದಬ್ಬಾಳಿಕೆಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪೂರಕ ಅಂಶಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಆಕಸ್ಮಿಕ ಗುಂಡು : ಯೋಧ ಸಾವು
ಜಮ್ಮು, ನ. ೯: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಬುಧವಾರ ಸೇನಾ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ರಾಷ್ಟಿçÃಯ ರೈಫಲ್ಸ್ ಘಟಕಕ್ಕೆ ಸೇರಿದ ಯೋಧನ ಸರ್ವಿಸ್ ರೈಫಲ್ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಅವರು ಹೇಳಿದ್ದಾರೆ.
ನೇಪಾಳದಲ್ಲಿ ಭಾರೀ ಭೂಕಂಪ: ಸಾವಿನ ಸಂಖ್ಯೆ ೬ಕ್ಕೆ ಏರಿಕೆ
ಕಠ್ಮಂಡು, ನ. ೯: ನೇಪಾಳ ರಾಜ್ಯದ ದೋತಿ ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಮತ್ತು ಇಂದು ನಸುಕಿನ ಜಾವ ಸಂಭವಿಸಿದ ತೀವ್ರ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ೬ಕ್ಕೇರಿದೆ. ಭೂಕಂಪನಕ್ಕೆ ಮನೆಯೊಂದು ಕುಸಿದು ಬಿದ್ದು ಈ ಅವಘಡ ಸಂಭವಿಸಿದೆ ಎಂದು ದೋತಿ ಜಿಲ್ಲಾಧಿಕಾರಿ ಕಲ್ಪನಾ ಶ್ರೇಷ್ಟ ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಜಿಲ್ಲೆಯ ಹಲವು ಕಡೆಗಳಲ್ಲಿ ಭೂಕಂಪನಕ್ಕೆ ಭೂಕುಸಿತವುಂಟಾಗಿ ಹತ್ತಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ ಎಂದು ಹೇಳಿದರು. ಅಧಿಕಾರಿಗಳು ಹೇಳುವ ಪ್ರಕಾರ, ಮೃತಪಟ್ಟವರಲ್ಲಿ ಒಬ್ಬರು ಮಹಿಳೆಯರಾಗಿದ್ದು ಇಬ್ಬರು ಮಕ್ಕಳು ಸೇರಿದ್ದಾರೆ. ಕಂಪನಕ್ಕೆ ಉಂಟಾಗಿರುವ ಸಾವು-ನೋವಿನ ಬಗ್ಗೆ ನಿಖರವಾದ ಮಾಹಿತಿ ಸಿಗಬೇಕಿದೆ. ದುರ್ಘಟನೆಯ ಸ್ಥಳಕ್ಕೆ ನೇಪಾಳ ಸೇನೆ ಧಾವಿಸಿ ಅಗತ್ಯ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ ೬.೩ ರಷ್ಟು ದಾಖಲಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ ೬.೩ ರಷ್ಟು ಇಂದು ನಸುಕಿನ ಜಾವ ಉಂಟಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ ಟ್ವೀಟ್ ಮಾಡಿದೆ. ಘಟನೆ ಕುರಿತು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಕಂಬನಿ ಮಿಡಿದಿದ್ದಾರೆ. ಗಾಯಗೊಂಡವರು ಮತ್ತು ಸಂತ್ರಸ್ತರಿಗೆ ತಕ್ಷಣದ ಮತ್ತು ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ನಾನು ಸಂಬAಧಪಟ್ಟವರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಉತ್ತರಾಖಂಡ, ಉತ್ತರ ಪ್ರದೇಶ ಹಾಗೂ ಭಾರತದ ರಾಷ್ಟç ರಾಜಧಾನಿ ದೆಹಲಿ ಮತ್ತು ಅದರ ಉಪನಗರಗಳಾದ ಗುರುಗ್ರಾಮ್ ಮತ್ತು ಘಾಜಿಯಾಬಾದ್ ಸೇರಿದಂತೆ ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ. ಇದಕ್ಕೂ ಮುನ್ನ, ಅದೇ ಭೂಕಂಪನ ಕೇಂದ್ರದ ಪ್ರಕಾರ, ನಿನ್ನೆ ರಾತ್ರಿ ೯.೦೭ ಕ್ಕೆ ೫.೭- ತೀವ್ರತೆಯ ಕಂಪನ ಮತ್ತು ರಾತ್ರಿ ೯.೫೬ ಕ್ಕೆ ೪.೧- ತೀವ್ರತೆಯ ಕಂಪನ ದಾಖಲಾಗಿತ್ತು. ಏಪ್ರಿಲ್ ೨೦೧೫ ರಲ್ಲಿ, ನೇಪಾಳದಲ್ಲಿ ೭.೮ ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು ೯,೦೦೦ ಜನರನ್ನು ಬಲಿ ತೆಗೆದುಕೊಂಡಿತ್ತು. ಸುಮಾರು ೨೨,೦೦೦ ಜನರು ಗಾಯಗೊಂಡಿದ್ದರು. ೮ ಲಕ್ಷ ಮನೆಗಳು ಮತ್ತು ಶಾಲಾ ಕಟ್ಟಡಗಳು ಹಾನಿಗೀಡಾಗಿದ್ದವು.