ಕುಶಾಲನಗರ, ನ.೧೧: ಅಕ್ಟೋಬರ್ ೨೧ ರಂದು ತಲಕಾವೇರಿ ಕ್ಷೇತ್ರದಿಂದ ಚಾಲನೆಗೊಂಡ ಕಾವೇರಿ ತೀರ್ಥಯಾತ್ರಾ ಅಭಿಯಾನ ತಾ. ೧೩ ರಂದು ತಮಿಳುನಾಡಿನ ಪೂಂಪ್‌ಹಾರ್‌ನಲ್ಲಿ ಸಮಾರೋಪಗೊಳ್ಳಲಿದೆ.
ಅಖಿಲ ಭಾರತ ಸನ್ಯಾಸಿಗಳ ಸಂಘ ಮತ್ತುಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ೧೨ ನೇ ವರ್ಷದ ಅಭಿಯಾನ ನಾಗಪಟ್ಟಣಂ ಜಿಲ್ಲೆಯ ಪೂಂಪ್‌ಹಾರ್ ಬಳಿ ಕಾವೇರಿ ನದಿ ಮತ್ತು ಬಂಗಾಳಕೊಲ್ಲಿ ಸಮುದ್ರ ಸಂಗಮದಲ್ಲಿ ಪವಿತ್ರ ಕಾವೇರಿ ತೀರ್ಥ ವಿಸರ್ಜಿಸುವುದರೊಂದಿಗೆ ಸಮಾಪ್ತಿಗೊಳ್ಳಲಿದೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ನೂರಾರು ಸಂಖ್ಯೆಯ ಸಾಧು ಸಂತರು, ಜಿಲ್ಲೆಯ ಪ್ರಮುಖರು ಪಾಲ್ಗೊಳ್ಳುವರು ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ತಿಳಿಸಿದ್ದಾರೆ.