ಮುಳ್ಳೂರು, ನ. ೧೧ : ಸಮೀಪದ ಶನಿವಾರಸಂತೆ ಕೂರ್ಗ್ ಬ್ರರ‍್ಸ್ ಮೆಲೋಡಿಸ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣಾ ಕಾರ್ಯಕ್ರಮ ತಾ. ೧೨ರಂದು (ಇಂದು) ಸಂಜೆ ೪ ಗಂಟೆಗೆ ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ನಿವೃತ್ತ ಕ್ಯಾಪ್ಟನ್ ವಿ.ಕೆ. ಯಶವಂತ್‌ಕುಮಾರ್, ಮುಳ್ಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಸಿ.ಎಸ್. ಸತೀಶ್, ಶನಿವಾರಸಂತೆ ಸುಪ್ರಜ ಗುರುಕುಲ ಶಾಲೆಯ ಪ್ರಾಂಶುಪಾಲೆ ಡಿ. ಸುಜಲಾದೇವಿ, ಶನಿವಾರಸಂತೆ ಗ್ರಾ.ಪಂ. ಸದಸ್ಯ ಎಸ್.ಎನ್.ರಘು, ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಉಪನ್ಯಾಸಕ ಕೆ.ಪಿ. ಜಯಕುಮಾರ್ ಮತ್ತು ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುತ್ತದೆ ಸಂಜೆ ೭ ಗಂಟೆಯಿAದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.