ಕುಶ್ವಂತ್ ಕೋಳಿಬೈಲು
ಮಡಿಕೇರಿ, ನ. ೧೨: ಶಿಕ್ಷಣ ದೊಂದಿಗೆ ಸಾಂಸ್ಕೃತಿಕ ಚಟುವಟಿ ಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ಕ್ರೀಯಾಶೀಲ ಮತ್ತು ಸೃಜನಶೀಲ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ತಜ್ಞ ಡಾ. ಮೇಜರ್ ಕುಶ್ವಂತ್ ಕೋಳಿಬೈಲು ಅವರು ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲೆ, ಕ್ರೀಡೆ, ಸಾಹಿತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿದರೆ, ಬಹುಮುಖಿಯಲ್ಲಿ ವ್ಯಕ್ತಿತ್ವ ವಿಕಸನ ಗೊಳ್ಳಲಿದೆ. ಆದ್ದರಿಂದ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸುವುದು ಅವಶ್ಯಕವಾಗಿದೆ ಎಂದರು. ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ. ವಿದ್ಯಾರ್ಥಿ ಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯ ಎಂದರು. ಸಾಂಸ್ಕೃತಿಕ ಚಟುವಟಿಕೆಗಳು ಒಂದು ರೀತಿ ಸಂವಹನ ಇದ್ದಂತೆ, ಸಂಪರ್ಕದಿAದ ಸ್ನೇಹ ಇದರಿಂದ ಜೀವನದಲ್ಲಿ ವ್ಯಕ್ತಿತ್ವದ ವ್ಯಾಪ್ತಿ ವಿಸ್ತಾರವಾಗುತ್ತದೆ. ಕ್ರೀಡೆ, ಕಲೆ, ಸಂಸ್ಕೃತಿ ಸೇತುವೆ ಇದ್ದ ಹಾಗೆ ಸೇತುವೆ ಸಂಪರ್ಕ ಸಾಧಿಸುತ್ತದೆ. ಸಂಪರ್ಕ ಇಲ್ಲದಿದ್ದರೆ ಅದು ದ್ವೀಪವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪುಟ್ಟರಾಜು ಮಾತನಾಡಿ, ೨ ವರ್ಷಗಳ ನಂತರ ಪದವಿಪೂರ್ವ ಶಿಕ್ಷಣ ಇಲಾಖೆ ಕಾರ್ಯಕ್ರಮ ಪ್ರಾರಂಭಿಸಿದೆ. ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದವರು ವಿಭಾಗೀಯ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಜಿಲ್ಲೆಗೆ ಒಳ್ಳೆಯ ಫಲಿತಾಂಶ ತರಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗೆ ಸಹಾಯವಾಗುತ್ತದೆ ಎಂದು ಶುಭ ಹಾರೈಸಿದರು. ಒಂದು ರೀತಿ ಸಂವಹನ ಇದ್ದಂತೆ, ಸಂಪರ್ಕದಿAದ ಸ್ನೇಹ ಇದರಿಂದ ಜೀವನದಲ್ಲಿ ವ್ಯಕ್ತಿತ್ವದ ವ್ಯಾಪ್ತಿ ವಿಸ್ತಾರವಾಗುತ್ತದೆ. ಕ್ರೀಡೆ, ಕಲೆ, ಸಂಸ್ಕೃತಿ ಸೇತುವೆ ಇದ್ದ ಹಾಗೆ ಸೇತುವೆ ಸಂಪರ್ಕ ಸಾಧಿಸುತ್ತದೆ. ಸಂಪರ್ಕ ಇಲ್ಲದಿದ್ದರೆ ಅದು ದ್ವೀಪವಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಪುಟ್ಟರಾಜು ಮಾತನಾಡಿ, ೨ ವರ್ಷಗಳ ನಂತರ ಪದವಿಪೂರ್ವ ಶಿಕ್ಷಣ ಇಲಾಖೆ ಕಾರ್ಯಕ್ರಮ ಪ್ರಾರಂಭಿಸಿದೆ. ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದವರು ವಿಭಾಗೀಯ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಜಿಲ್ಲೆಗೆ ಒಳ್ಳೆಯ ಫಲಿತಾಂಶ ತರಬೇಕು. ಇದು ಸ್ಪರ್ಧಾತ್ಮಕ ಪರೀಕ್ಷೆಗೆ ಸಹಾಯವಾಗುತ್ತದೆ ಎಂದು ಶುಭ ಹಾರೈಸಿದರು.