ಸೋಮವಾರಪೇಟೆ: ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಎಸ್.ಎನ್. ನರಗುಂದ ಅವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಜಾಥಾ ನಡೆಯಿತು. ವಿವಿಧ ಇಲಾಖಾಧಿಕಾರಿಗಳು, ಸಂತ ಜೋಸೆಫರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಸೋಮವಾರಪೇಟೆ: ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಎಸ್.ಎನ್. ನರಗುಂದ ಅವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾನದ ಜಾಗೃತಿ ಜಾಥಾ ನಡೆಯಿತು. ವಿವಿಧ ಇಲಾಖಾಧಿಕಾರಿಗಳು, ಸಂತ ಜೋಸೆಫರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕುಶಾಲನಗರ: ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲಾಡಳಿತದ ಸೂಚನೆ ಮೇರೆಗೆ ಕುಶಾಲನಗರ ತಾಲೂಕು ಆಡಳಿತದಿಂದ ಮತದಾನ ಜಾಗೃತಿ ಜಾಥಾ ಕುಶಾಲನಗರದಲ್ಲಿ ನಡೆಯಿತು. ತಾಲೂಕು ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಜಾಗೃತಿ ಫಲಕ ಹಿಡಿದು ಘೋಷಣೆ ಕೂಗುವ ಮೂಲಕ ಅರಿವು ಮೂಡಿಸಲಾಯಿತು.ವೀರಾಜಪೇಟೆ: ಮತದಾರರ ಪಟ್ಟಿ ಪರಿಷ್ಕರಣೆ-೨೦೨೩ರ ಭಾಗವಾಗಿ ವೀರಾಜಪೇಟೆ ವ್ಯಾಪ್ತಿಯಲ್ಲಿ ತಾಲೂಕು ಮಿನಿ ವಿಧಾನಸೌಧದ ಬಳಿಯಿಂದ ಕಾಲ್ನಡಿಗೆ ಜಾಥಾ ನಡೆಯಿತು. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಹಾಗೂ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ತಾಲೂಕು ತಹಸೀಲ್ದಾರ್ ಅರ್ಚನಾ ಭಟ್ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ೧೮ ವರ್ಷ ಪೂರ್ಣಗೊಳ್ಳುವ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆAದು ಮನವಿ ಮಾಡಿದರು.
ಕರಡು ಮತದಾರರ ಪಟ್ಟಿಗಳನ್ನು ಅ.೩೦ ರಂದು ತಾಲೂಕು ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರು ಇದೆಯೇ ಎಂದು ಖಚಿತ ಪಡಿಸಿಕೊಳ್ಳುವಂತೆ ಹೇಳಿದರು. ವಿಳಾಸ ಬದಲಾವಣೆ, ಹೆಸರು, ವಯಸ್ಸು ತಪ್ಪಾಗಿ ನಮೂದಾಗಿದ್ದಲ್ಲಿ ಸರಿಪಡಿಸಿಕೊಳ್ಳುವಂತೆ ಹಾಗೂ ಈ ಬಗ್ಗೆ ಇತರರಿಗೂ ಮಾಹಿತಿ ನೀಡಿ ಆಕ್ಷೇಪಣೆ ಸಲ್ಲಿಸಲು ಹಾಗೂ ನೋಂದಾಯಿಸಲು ತಾ. ೨೫ ಕೊನೆಯ ದಿನವೆಂದರು.
ಕಾಲ್ನಡಿಗೆ ಜಾಥಾವು ತಾಲೂಕು ಕಚೇರಿ ಮುಂಭಾಗದಿAದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಮೂಲಕ ಗಡಿಯಾರ ಕಂಬ, ವೀರಾಜಪೇಟೆ ಖಾಸಗಿ ಬಸ್ ನಿಲ್ದಾಣದ ಮೂಲಕ ದೊಡ್ಡಟ್ಟಿ ಚೌಕಿಯಿಂದ ತಾಲೂಕು ಕಚೇರಿವರೆಗೆ ನಡೆಯಿತು. ಜಾಥಾ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ವೀರಾಜಪೇಟೆ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ವೀರಾಜಪೇಟೆ ಹೋಬಳಿ ಕಂದಾಯ ಇಲಾಖೆ ಪರಿವೀಕ್ಷಕ ಮಂಡೇಪAಡ ಹರೀಶ್ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ, ಮುಖ್ಯ ಚುನಾವಣಾಧಿಕಾರಿ ಸಿಬ್ಬಂದಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಿಬ್ಬಂದಿಗಳು, ಪುರಸಭೆ ಸಿಬ್ಬಂದಿಗಳು ಭಾಗವಹಿಸಿದ್ದರು.