ಕಣಿವೆ, ನ. ೧೧: ೧೫ ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಕ್ರಾಂತಿ ಮಾಡುವ ಮೂಲಕ ಕುಲ ಕುಲ ಕುಲ ಎಂದು ಹೊಡೆದಾಡದಿರಿ ಎಂದು ಸಮಾಜಕ್ಕೆ ಸಂದೇಶ ನೀಡಿದ ಕನಕದಾಸರು ಮಹಾನ್ ದಾರ್ಶನಿಕ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಬಣ್ಣಿಸಿದರು.

ಕೊಡಗು ಜಿಲ್ಲಾಡಳಿತದ ವತಿಯಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಂಡಿದ್ದ ಭಕ್ತ ಕನಕ ದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರು ಕನಕದಾಸ ರಂತಹ ಶ್ರೇಷ್ಠ ದಾರ್ಶನಿಕರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಉತ್ತಮವಾದ ಸಮಾಜ ಕಟ್ಟಲು ಮುಂದಾಗಬೇಕೆAದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡಗು ಅಪರ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ (ಮೊದಲ ಪುಟದಿಂದ) ಮಾತನಾಡಿ, ಯಾವುದೇ ಸಂತ ಶ್ರೇಷ್ಠರು ಶೋಷಿತರ ಧ್ವನಿಯಾಗಿ ಕೆಲಸ ಮಾಡಿ ಹೋದವರು. ಕೆಳ ವರ್ಗದ ಮಂದಿಗೆ ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ತಲುಪಿಸುವಲ್ಲಿ ಹಾಗು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವಲ್ಲಿ ಯುವ ಜನಾಂಗ ಮುಂದಾಗಬೇಕೆAದು ಕರೆ ಕೊಟ್ಟರು.

ಮುಖ್ಯ ಭಾಷಣಕಾರರಾಗಿದ್ದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಮಾತನಾಡಿ, ಈ ನಾಡಿಗೆ ದಾಸ ಪರಂಪರೆಯ ಕೊಡುಗೆ ಅಪಾರವಾದುದು.

ಭಕ್ತ ಕನಕದಾಸ ಹಾಗು ಪುರಂದರದಾಸರ ಕೀರ್ತನೆಗಳು ಹಾಗು ಭಾಮಿನಿ ಷಟ್ಪದಿಗಳ ಮೂಲಕ ಸಮಾಜಕ್ಕೆ ಸಾರಿದ ಸಂದೇಶಗಳು ಎಂದೆAದಿಗು ಪ್ರಸ್ತುತ. ಕನಕದಾಸರ ಚಿಂತನೆಗಳನ್ನು ಮಕ್ಕಳ ಮೂಲಕ ಸಮಾಜಕ್ಕೆ ಹೆಚ್ಚು ಹೆಚ್ಚಾಗಿ ಪಸರಿಸುವ ಕೆಲಸವಾಗಬೇಕಿದೆ ಎಂದು ವೆಂಕಟನಾಯಕ್ ಹೇಳಿದರು.

ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಕನಕದಾಸರ ಕೀರ್ತನೆಗಳು ಬದುಕಿಗೆ ದಾರಿದೀಪವಾಗಿವೆ. ಕರ್ನಾಟಕದ ಸಾಂಸ್ಕೃತಿಕ ಇತಿಹಾಸದಲ್ಲಿ ಕನಕದಾಸರ ಕೊಡುಗೆ ಅಪಾರವಾದುದು ಎಂದು ಸುರೇಶ್ ಹೇಳಿದರು.

ಏಳನೇ ತರಗತಿ ವಿದ್ಯಾರ್ಥಿನಿ ಸುಂಟಿಕೊಪ್ಪದ ಶ್ರೀಷಾ ಕನಕದಾಸರ ಕುರಿತು ಮಾತನಾಡಿದರು.

ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ.ಪ್ರಕಾಶ್, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ನರಗುಂದ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಯೋಜನಾಧಿಕಾರಿ ಸಿ.ಎಂ.ಅಣ್ಣಯ್ಯ, ಬಿಸಿಎಂ ಇಲಾಖೆಯ ಮೋಹನಕುಮಾರ್, ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಆರ್. ಪ್ರಭಾಕರ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಲತಾ ಮತ್ತಿತರರು ಇದ್ದರು. ಸಮುದಾಯದಲ್ಲಿನ ಹತ್ತನೆ ತರಗತಿ ಹಾಗು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಕಲಾವಿದ ಬಿ.ಸಿ.ಶಂಕರಯ್ಯ ಪ್ರಾರ್ಥನ ಗೀತೆ ಹಾಡಿದರು. ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿದರು. ಶಿಕ್ಷಣ ಇಲಾಖೆಯ ಸಿ ಆರ್ ಪಿ ಲೋಕೇಶ್ ವಂದಿಸಿದರು.

ವೀರಾಜಪೇಟೆ: ಸಾಮಾಜಿಕ ನ್ಯಾಯ ಎತ್ತಿ ಹಿಡಿದ ದಾರ್ಶನಿಕ ಮಹಾನ್ ಕವಿ ಮತ್ತು ಭಕ್ತಿಯ ಸಾಮ್ರಾಜ್ಯ ಕಟ್ಟಿದವರು ಕನಕದಾಸರು ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರರಾದ ಅರ್ಚನಾ ಭಟ್ ಬಣ್ಣಿಸಿದರು.

ವೀರಾಜಪೇಟೆ ತಾಲೂಕು ಆಡಳಿತದ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಂತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ತಹಶೀಲ್ದಾರ್ ಅರ್ಚನಾ ಭಟ್ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯದಿಂದ ಕನ್ನಡ ಭಾಷೆಗೆ ರಾಷ್ಟಿçÃಯ ಸ್ಥಾನಮಾನ ದೊರೆತಿದೆಯೇ ಹೊರತು ಹೋರಾಟದಿಂದ ಅಲ್ಲ, ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಹೆಚ್ಚಿಸಿವೆ. ಕನಕದಾಸರು, ಬಸವಣ್ಣನವರು ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಿದ್ದರೇ ಹೊರತು ಸಂಸ್ಕöÈತದಲ್ಲಿ ಸಾಹಿತ್ಯ ರಚಿಸಲಿಲ್ಲ. ಈ ಮೂಲಕ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿದರು. ವರ್ಗ ರಹಿತ ಸಮಾಜವನ್ನು ಕಟ್ಟಲು ಶ್ರಮಿಸಿದವರು ಕನಕದಾಸರು ಎಂದರಲ್ಲದೆ ದಾರ್ಶನಿಕರ ತತ್ವ ಸಿದ್ಧಾಂತಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಕಾರ್ಯ ನಡೆಯಬೇಕು. ಕನಕದಾಸರು ಜಾತಿ ವರ್ಗಗಳನ್ನು ಮೀರಿದ ವ್ಯಕ್ತಿಯಾಗಿದ್ದು ಅವರ ಜಾತ್ಯತೀತ ಮನೋಭಾವನೆಯನ್ನು ಎಲ್ಲಾ ಸಮುದಾಯದವರು ಅರ್ಥ ಮಾಡಿಕೊಂಡು ಜಾರಿಗೆ ತರಲು ಪ್ರಯತ್ನಿಸಬೇಕು ಎಂದು ಹೇಳಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಹೆಚ್. ಪೊನ್ನು, ಪ್ರದೀಪ್ ಕುಮಾರ್, ಮೋಹನ್, ಮಂಜುನಾಥ್ ಸೇರಿದಂತೆ ತಾಲೂಕು ಕಚೆೆÃರಿ ಸಿಬ್ಬಂದಿಗಳು ಹಾಜರಿದ್ದರು. ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತ ಕನಕದಾಸ ಸೇವಾ ಸಮಿತಿಯ ವತಿಯಿಂದ ಭುವನಗಿರಿ ಗ್ರಾಮದಲ್ಲಿ ಅದ್ಧೂರಿಯಾಗಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಕನಕದಾಸರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ನೆರವೇರಿಸಿ ಮಾತನಾಡಿದ ಸೀಗೆಹೊಸೂರು ವಿಭಾಗದ ಗ್ರಾಮ ಪಂಚಾಯಿತಿ ಸದಸ್ಯ ಅನಂತ್ ಭಕ್ತ ಕನಕದಾಸರ ಹಾಗೂ ಪುರಂದರದಾರ ಕೀರ್ತನೆಗಳು, ಅವರ ಚಿಂತನೆಗಳು ಸಮಾಜಕ್ಕೆ ದಾರಿ ದೀಪವಾಗಿದೆ ಎಂದರು.

ಭಕ್ತ ಕನಕದಾಸ ಸೇವಾ ಸಮಿತಿಯ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಕೃಷ್ಣ, ಕಾರ್ಯದರ್ಶಿ ಚಂದ್ರು, ಸಮಿತಿಯ ಸದಸ್ಯರಾದ ವಿರೂಪಾಕ್ಷ, ಕುಮಾರ್, ಸುಬ್ರಹ್ಮಣಿ, ಧರ್ಮ, ಮಹದೇವ, ಶೇಕರ್, ಗಿಡ್ಡಪ್ಪ, ನಿಂಗಾರಾಜು ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.

ಮುಳ್ಳೂರು: ಸಮೀಪದ ಮಾಲಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಶಾಲೆಯ ಎಸ್‌ಡಿಎಂಸಿ ವತಿಯಿಂದ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಎಸ್‌ಡಿಎಂಸಿ ಪ್ರಮುಖರು ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ದೇವೇಂದ್ರ, ಅಂಗನವಾಡಿ ಶಿಕ್ಷಕಿ ವೇಧಕುಮಾರಿ, ಪ್ರಮುಖರಾದ ಜಾನಕಿ ಗಂಗಾಧರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜುಗಳಲ್ಲಿ ಕನಕದಾಸ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು. ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ ಕನಕದಾಸರ ಕೀರ್ತನೆಗಳ ಕುರಿತು ಹಾಗೂ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕಿ ಪಾಡಿಯಮಂಡ ಚಂದ್ರಕಲಾ ಮಹೇಶ್ ಮಾತನಾಡಿ ಸಮಾಜಕ್ಕೆ ಕನಕದಾಸರ ಕೊಡುಗೆ ಅಪಾರವಾಗಿದ್ದು ವಿದ್ಯಾರ್ಥಿಗಳು ಇವರ ಉತ್ತಮ ಗುಣನಡತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಈ ಸಂದರ್ಭ ಹಿರಿಯ ಶಿಕ್ಷಕಿ ಮುಂಡAಡ ಕವಿತಾ ಅಯ್ಯಣ್ಣ, ಶಿಕ್ಷಕ ಮೂಡೇರ ಕಾಳಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಕನಕದಾಸರ ಗುಣಗಾನ ಮಾಡಿದರು. ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿಯನ್ನು ಆಚರಿಸಲಾಯಿತು. ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕಿ ಮೀನಾ ಮಾತನಾಡಿದರು. ವಿದ್ಯಾರ್ಥಿಗಳು ಕನಕದಾಸರ ಜೀವನ ಚರಿತ್ರೆಯ ಕುರಿತು ಭಾಷಣ, ಗೀತೆಗಳನ್ನು ಹಾಡಿದರು. ಈ ಸಂದರ್ಭ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶನಿವಾರಸಂತೆ: ಪಟ್ಟಣದ ಸೇಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಕನಕದಾಸರ ಜಯಂತಿ ಆಚರಣೆಗೆ ಕೀರ್ತನೆಗಳನ್ನು ಹಾಡುವ ಮೂಲಕ ಚಾಲನೆ ನೀಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಫಾದರ್ ಸಬಾಸ್ಟಿನ್ ಮೈಕಲ್ ಮಾತನಾಡಿ, ಕೀರ್ತನೆಗಳ ಮೂಲಕ ಬದುಕಿನ ಸಮಾನತೆಯ ಸಂದೇಶ ಸಾರಿದ ಕನಕದಾಸರು ದಾಸಶ್ರೇಷ್ಠರು. ಇವರ ಕೀರ್ತನೆಗಳಲ್ಲಿ ಬದುಕಿನ ಸಾರ ಅಡಗಿದೆ ಎಂದರು. ಶಿಕ್ಷಕಿ ಗಗನಾ ಕನಕದಾಸರ ಜೀವನ ಚರಿತ್ರೆ ಹಾಗೂ ಕೀರ್ತನೆಗಳ ಬಗ್ಗೆ ಮಾತನಾಡಿದರು. ಆಶಾ ನಿರೂಪಿಸಿದರು. ಶಿಕ್ಷಕ ವೃಂದದವರು ಹಾಜರಿದ್ದರು.