ಕರಿಕೆ, ನ. ೧೩: ಇಲ್ಲಿನ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಜಮಾಬಂದಿ ಸಭೆಯನ್ನು ನೋಡಲ್ ಅಧಿಕಾರಿ ಕೃಷಿ ಇಲಾಖೆಯ ನಿರ್ದೇಶಕ ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾ.ಪಂ. ಅಧ್ಯಕ್ಷೆ ಕೆ. ಕಲ್ಪನಾ ಜಗದೀಶ್ ಅವರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ೨೦೨೧-೨೨ನೇ ಸಾಲಿನಲ್ಲಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ವಿವರಗಳನ್ನು ಸಭೆಗೆ ಮಾಹಿತಿಯಿತ್ತರು. ನಂತರ ವಾರ್ಡ್ ಸಭೆ ನಡೆಸಿ ಗ್ರಾಮ ಸಭೆ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕಾರ್ಯಪಾಲಕ ಅಭಿಯಂತರರು, ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರು, ಮಾಜಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.