ಸಿದ್ದಾಪುರ, ನ. ೧೩: ನೆಲ್ಲಿಹುದಿಕೇರಿ ಸಮೀಪದ ಅತ್ತಿಮಂಗಲದಿAದ ಅರೆಕಾಡು ಮಾರ್ಗವಾಗಿ ಮಡಿಕೇರಿಗೆ ತೆರಳುವ ಮುಖ್ಯ ರಸ್ತೆಯು ತೀವ್ರವಾಗಿ ಹದಗೆಟ್ಟಿದ್ದು ಈ ಹಿನ್ನೆಲೆಯಲ್ಲಿ ೫ ಕೋಟಿ ವೆಚ್ಚದಲ್ಲಿ ನಡೆಯಲಿರುವ ರಸ್ತೆ ಕಾಮಗಾರಿಗೆ ಶಾಸಕ ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಸುಮಾರು ೧೩.೬೦ ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗಿದೆ. ಈಗಾಗಲೇ ವೀರಾಜಪೇಟೆ ಕ್ಷೇತ್ರ ಹಾಗೂ ಮಡಿಕೇರಿ ಕ್ಷೇತ್ರದ ರಸ್ತೆ ಕಾಮಗಾರಿಗೆ ಸರಕಾರದಿಂದ ಇನ್ನೂರು ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯ ಕಾರಣ ಮಣ್ಣಿನಲ್ಲಿ ತೇವಾಂಶ ಹೆಚ್ಚಿದ್ದು ರಸ್ತೆ ಕಾಮಗಾರಿಗೆ ಅಡಚಣೆ ಉಂಟಾಗಿದೆ. ಮಳೆಯ ನಡುವೆ ಕಾಮಗಾರಿ ಪ್ರಾರಂಭಿಸಿದರೆ ಕಾಮಗಾರಿಯ ಗುಣಮಟ್ಟ ಕಳಪೆಯಾಗಲಿದೆ. ಮಳೆ ಬಿಡುವು ನೀಡಿದಲ್ಲಿ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರು.

ಈ ಸಂದÀರ್ಭ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಉಪಾಧ್ಯಕ್ಷ ಸುದಾ, ಸದಸ್ಯರಾದ ಗಣೇಶ್, ಮನು ಮಹೇಶ್, ಜಯಮ್ಮ, ಜಲ, ಮಂಜುಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವಿ.ಕೆ. ಲೋಕೇಶ್, ಮಾಜಿ ತಾ.ಪಂ. ಉಪಾಧ್ಯಕ್ಷ ರಘು ಆನಂದ, ಮಾಜಿ ತಾ.ಪಂ. ಸದಸ್ಯರಾದ ಅಪ್ರು ರವೀಂದ್ರ, ನೆಲ್ಲಿಹುದಿಕೇರಿ ಗ್ರಾ.ಪಂ. ಸದಸ್ಯ ಟಿ.ಆರ್. ಶಿವದಾಸ್, ವಾಲ್ನೂರು ಬಿಜೆಪಿ ಶಕ್ತಿ ಕೇಂದ್ರ ಸಹಪ್ರಮುಖ್ ರಾಜೇಶ್ ಇನ್ನಿತರರು ಹಾಜರಿದ್ದರು.