ಮಡಿಕೇರಿ, ನ. ೧೨: ಪ್ರಸಕ್ತ ಸಾಲಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗ ದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಕನ್ನಡ ರಾಜ್ಯೋತ್ಸವ” ಕಾರ್ಯಕ್ರಮವು ತಾ. ೧೮ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ (ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹತ್ತಿರ) ನಡೆಯಲಿದೆ.

೫-೮ ವರ್ಷದೊಳಗಿನ ೧ ರಿಂದ ೩ನೇ ತರಗತಿ ವಿದ್ಯಾರ್ಥಿಗಳಿಗೆ, ೯-೧೨ ವರ್ಷದೊಳಗಿನ ೪ ರಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ಹಾಗೂ ೧೩ ರಿಂದ ೧೫ ವರ್ಷದೊಳಗಿನ ೮ ರಿಂದ ೧೦ನೇ ತರಬೇತಿ ವಿದ್ಯಾರ್ಥಿಗಳಿಗೆ ಕನ್ನಡ ಗೀತೆ ಸ್ಪರ್ಧೆ ಹಾಗೂ ಸ್ವಾತಂತ್ರö್ಯ ಹೋರಾಟದಲ್ಲಿ ಕನ್ನಡಿಗರು ಛದ್ಮವೇಷ ಸ್ಪರ್ಧೆ ನಡೆಯಲಿದೆ. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಶಂಸನ ಪತ್ರ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ. ಆದ್ದರಿಂದ ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ತಾ. ೧೫ ರೊಳಗೆ ದೂ. ೮೬೧೮೮೬೧೫೦೫, ೬೩೬೩೨೮೫೬೮೫ ಕಚೇರಿ ಸಮಯದಲ್ಲಿ ಬೆಳಿಗ್ಗೆ ೧೦.೩೦ ರಿಂದ ೫ ಗಂಟೆವರೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಿ ಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.