ಮಡಿಕೇರಿ, ನ. ೧೨: ಕೊಡಗು ಪ್ರೆಸ್ ಕ್ಲಬ್‌ನ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮ ಡಿ. ೧೮ ರಂದು ನಡೆಯಲಿದ್ದು, ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಭಾ ಪುರಸ್ಕಾರಕ್ಕೆ ಸದಸ್ಯರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು. ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಸದಸ್ಯರ ಮಕ್ಕಳು ೨೦೨೧-೨೨ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇ. ೮೦ ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಅಂಕಪಟ್ಟಿಯ ಪ್ರತಿಯನ್ನು ನೀಡಬೇಕು. ಖುದ್ದು ಹಾಜರಾಗಲು ಸಾಧ್ಯ ಆಗುವ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.