ಸೋಮವಾರಪೇಟೆ, ನ. ೧೩: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯೆಯೊಂದಿಗೆ ವಿವೇಕ ಹಾಗೂ ವಿನಯವನ್ನು ಮೈಗೂಡಿಸಿ ಕೊಳ್ಳಬೇಕೆಂದು ಆದಿಚುಂಚನಗಿರಿ ಎಜುಕೇಷನ್ ಟ್ರಸ್ಟ್ನ ಹಾಸನ, ಕೊಡಗು ವಿಭಾಗದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ಸಮೀಪದ ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ಅಂರ‍್ರಾಷ್ಟಿçÃಯ ವಿಜ್ಞಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮಕ್ಕಳಲ್ಲಿ ಪ್ರತಿಭೆ ಇರುತ್ತದೆ. ಸುಪ್ತವಾಗಿರುವ ಪ್ರತಿಭೆಯನ್ನು ಹೊರತೆಗೆಯುವ ಬಹುದೊಡ್ಡ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ. ವಿಜ್ಞಾನ ಮಕ್ಕಳ ಕಲಿಕೆಗೆ ಪೂರಕವಾಗಿರಬೇಕು. ಮಕ್ಕಳನ್ನು ಅನ್ವೇಷಣೆ ಕಡೆಗೆ ಕರೆ ಸೋಮವಾರಪೇಟೆ, ನ. ೧೩: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯೆಯೊಂದಿಗೆ ವಿವೇಕ ಹಾಗೂ ವಿನಯವನ್ನು ಮೈಗೂಡಿಸಿ ಕೊಳ್ಳಬೇಕೆಂದು ಆದಿಚುಂಚನಗಿರಿ ಎಜುಕೇಷನ್ ಟ್ರಸ್ಟ್ನ ಹಾಸನ, ಕೊಡಗು ವಿಭಾಗದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.
ಸಮೀಪದ ಗೌಡಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ಅಂರ‍್ರಾಷ್ಟಿçÃಯ ವಿಜ್ಞಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಮಕ್ಕಳಲ್ಲಿ ಪ್ರತಿಭೆ ಇರುತ್ತದೆ. ಸುಪ್ತವಾಗಿರುವ ಪ್ರತಿಭೆಯನ್ನು ಹೊರತೆಗೆಯುವ ಬಹುದೊಡ್ಡ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ. ವಿಜ್ಞಾನ ಮಕ್ಕಳ ಕಲಿಕೆಗೆ ಪೂರಕವಾಗಿರಬೇಕು. ಮಕ್ಕಳನ್ನು ಅನ್ವೇಷಣೆ ಕಡೆಗೆ ಕರೆ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಉತ್ತಮ ವಿಜ್ಞಾನ ಪ್ರಶಸ್ತಿ ಪುರಸ್ಕೃತ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಇಬ್ರಾಹಿಂ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಗೌಡಳ್ಳಿ ಪ್ರೌಢಶಾಲೆಯ ಗಣಿತ ಶಿಕ್ಷಕ ದಿನೇಶ್ ಅವರುಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ವಿಜ್ಞಾನ ಮಾದರಿಗಳು ಗಮನ ಸೆಳೆದವು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.
ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ಮಲ್ಲೇಶಪ್ಪ, ಇನ್ಸ್ಪೆಕ್ಟರ್ ಪರಶಿವಮೂರ್ತಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್, ತಾಲೂಕು ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಸಿ.ಆರ್.ಪಿ. ದೇವರಾಜೇಗೌಡ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಹೆಚ್.ಆರ್. ಮುತ್ತಣ್ಣ, ಹೆಚ್.ಆರ್. ಸುರೇಶ್, ಜಿ.ಎಂ. ಹೂವಯ್ಯ, ಪುಟ್ಟಸ್ವಾಮಿ, ವೀರಭದ್ರಪ್ಪ ಹಾಗೂ ಮುಖ್ಯ ಶಿಕ್ಷಕಿ ರತ್ನ ಇದ್ದರು.