ಮಡಿಕೇರಿ, ನ. ೧೩: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೪ ಕೊನೆ ದಿನವಾಗಿದೆ. ಆನ್‌ಲೈನ್ ವಿಳಾಸ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅರ್ಜಿ ಸಲ್ಲಿಸಬಹುದು.

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರಬೇಕು. ಅರ್ಜಿದಾರರ ಆಧಾರ್‌ಗೆ ಬ್ಯಾಂಕ್ ಖಾತೆಯು ಜೋಡಣೆಯಾಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಎಂಜಿನಿಯರಿAಗ್, ವೈದ್ಯಕೀಯ, ದಂತ ವೈದ್ಯಕೀಯ ಮತ್ತಿತರ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ/ಎನ್‌ಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಎಚ್‌ಡಿ., ಕೋರ್ಸ್ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು. ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. ೨ ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. ೧ ಲಕ್ಷಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡಲಾಗುವುದು, ವ್ಯಾಸಂಗ ಪೂರ್ಣಗೊಂಡ ನಂತರ ನಾಲ್ಕು ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು ೩೬ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೬ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೩೫ ವರ್ಷದ ಒಳಗಿನವರಾಗಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಪ್ರಾಂಶುಪಾಲರಿAದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು. ಮಹಿಳೆಯರಿಗೆ ಶೇ. ೩೩ ಹಾಗೂ ವಿಕಲಚೇತನರಿಗೆ ಶೇ. ೫ ರಷ್ಟು ಮೀಸಲಾತಿ ಇದೆ.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ೯೪೪೮೪೫೧೧೧೧ ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ: ೦೮೨೭೨-೨೨೧೬೫೬ ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹದೇವಿ ಅವರು ತಿಳಿಸಿದ್ದಾರೆ.