ಶಿವಲಿಂಗ ಪೂಜೆಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ವಾರಣಾಸಿ, ನ. ೧೪: ಗ್ಯಾನ್ ವಾಪಿ ಮಸೀದಿಯಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಫಾಸ್ಟ್ ಟ್ರ‍್ಯಾಕ್ ಕೋರ್ಟ್ ನ.೧೭ ಕ್ಕೆ ಮುಂದೂಡಿದೆ. ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮಹೇಂದ್ರ ಪಾಂಡೆ, ತೀರ್ಪನ್ನು ನ.೧೭ ಕ್ಕೆ ಮುಂದೂಡಿದ್ದಾರೆ ಎಂದು ಜಿಲ್ಲಾ ಸಹಾಯಕ ಸರ್ಕಾರಿ ವಕೀಲ ಸುಲಭ್ ಪ್ರಕಾಶ್ ಹೇಳಿದ್ದಾರೆ. ಅ.೨೭ ರಂದು ವಿವಾದಕ್ಕೆ ಸಂಬAಧಿಸಿದAತೆ ಉಭಯ ಪಕ್ಷಗಳ ವಾದವನ್ನು ಆಲಿಸಿದ ಕೋರ್ಟ್, ನ.೮ ರಂದು ತೀರ್ಪನ್ನು ಕಾಯ್ದಿರಿಸಿತ್ತು. ನ.೮ ರಂದು ನ್ಯಾಯಾಧೀಶರು ರಜೆಯಲ್ಲಿದ್ದ ಕಾರಣ ತಾ.೧೪ಕ್ಕೆ ಮುಂದೂಡಲಾಗಿತ್ತು. ಮೇ ೨೪ ರಂದು, ವಿಶ್ವ ವೈದಿಕ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಾದಿ ಕಿರಣ್ ಸಿಂಗ್ ವಾರಾಣಾಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ, "ಗ್ಯಾನ್ ವಾಪಿ ಸಂಕೀರ್ಣಕ್ಕೆ ಮುಸ್ಲಿಮರ ಪ್ರವೇಶವನ್ನು ನಿರ್ಬಂಧಿಸಿ ಆ ಪ್ರದೇಶವನ್ನು ಸನಾತನ ಸಂಘಕ್ಕೆ ಹಸ್ತಾಂತರಿಸಿ ಅಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸುವುದಕ್ಕೆ ಅನುಮತಿ ನೀಡಬೇಕು" ಎಂದು ಮನವಿ ಮಾಡಿದ್ದರು. ಮೇ ೨೫ ರಂದು ಜಿಲ್ಲಾ ನ್ಯಾಯಾಧೀಶರಾದ ಎ.ಕೆ. ವಿಶ್ವೇಶ್ ಅವರು ಫಾಸ್ಟ್ ಟ್ರ‍್ಯಾಕ್ ಕೋರ್ಟ್ಗೆ ಪ್ರಕರಣವನ್ನು ವರ್ಗಾಯಿಸಿದ್ದರು. ವಾರಣಾಸಿ ಜಿಲ್ಲಾ ಮ್ಯಾಜಿಸ್ಟೆçÃಟ್, ಪೊಲೀಸ್ ಆಯುಕ್ತರು, ಗ್ಯಾನ್ ವಾಪಿ ಮಸೀದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಅಂಜುಮನ್ ಇಂತಾಜ್ಮಿಯಾ ಸಮಿತಿ, ವಿಶ್ವನಾಥ ದೇವಾಲಯ ಟ್ರಸ್ಟ್ನ್ನು ಪ್ರಕರಣದಲ್ಲಿ ರೆಸ್ಪಾಂಡೆAಟ್ ಆಗಿಸಲಾಗಿತ್ತು.

ಬಲವಂತದ ಧಾರ್ಮಿಕ ಮತಾಂತರ ‘ಬಹಳ ಗಂಭೀರ' ವಿಷಯ : ಸುಪ್ರೀಂ

ನವದೆಹಲಿ, ನ. ೧೪: ಬಲವಂತದ ಧಾರ್ಮಿಕ ಮತಾಂತರವನ್ನು 'ಬಹಳ ಗಂಭೀರ' ವಿಚಾರವೆಂದು ಪರಿಗಣಿಸಿದ ಸುಪ್ರೀಂ ಕೋರ್ಟ್, ಸೋಮವಾರ ಕೇಂದ್ರವು ಮಧ್ಯಪ್ರವೇಶಿಸಿ ಈ ಆಚರಣೆಯನ್ನು ಪರಿಶೀಲಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವಂತೆ ಹೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಲ್ಲಿಸದಿದ್ದರೆ 'ಬಹಳ ಕಠಿಣ ಪರಿಸ್ಥಿತಿ'ಯು ನಿರ್ಮಾಣವಾಗುತ್ತದೆ' ಎಂದು ಅದು ಎಚ್ಚರಿಸಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು, ಆಮಿಷಗಳ ಮೂಲಕ ನಡೆಯುವ ಮತಾಂತರಗಳನ್ನು ತಡೆಯುವ ಕ್ರಮಗಳನ್ನು ಪಟ್ಟಿ ಮಾಡಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ತಿಳಿಸಿದೆ. ಇದು ಬಹಳ ಗಂಭೀರವಾದ ವಿಷಯ. ಬಲವಂತದ ಮತಾಂತರವನ್ನು ನಿಲ್ಲಿಸಲು ಕೇಂದ್ರದಿAದ ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಇಲ್ಲದಿದ್ದರೆ ಬಹಳ ಕಷ್ಟದ ಪರಿಸ್ಥಿತಿ ಎಂದುರಾಗುತ್ತದೆ. ನೀವು ಯಾವ ಕ್ರಮವನ್ನು ಕೈಗೊಳ್ಳುವಿರಿ ಎಂಬುದನ್ನು ನಮಗೆ ತಿಳಿಸಿ.... ನಂತರ ನೀವು ಹೆಜ್ಜೆ ಹಾಕಬೇಕು' ಎಂದು ಸೂಚಿಸಿದೆ ಇದು ರಾಷ್ಟçದ ಭದ್ರತೆ, ಧರ್ಮ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ‍್ಯದ ಮೇಲೆ ಪರಿಣಾಮ ಬೀರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಆದ್ದರಿಂದ, ಭಾರತ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸುವುದು ಮತ್ತು ಅಂತಹ ಬಲವಂತದ ಮತಾಂತರವನ್ನು ತಡೆಯಲು ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದೆಂಬುದರ ಬಗ್ಗೆ ತಿಳಿಸುವುದು ಉತ್ತಮ ಎಂದು ಪೀಠ ಹೇಳಿದೆ.

ಕಂದಕಕ್ಕೆ ಉರುಳಿಬಿದ್ದ ವಾಹನ : ಮೂವರು ಅಧಿಕಾರಿಗಳ ಸಾವು

ಭದರ್ವಾ/ಜಮ್ಮು, ನ. ೧೪: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು ಸರ್ಕಾರಿ ಅಧಿಕಾರಿಗಳು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. ದೋಡಾ ಜಿಲ್ಲೆಯ ಆರ್ & ಬಿ ಕಾರ್ಯನಿರ್ವಾಹಕ ಇಂಜಿನಿಯರ್, ಎಇಇ ಮತ್ತು ಸೂಪರಿಂಟೆAಡಿAಗ್ ಎಂಜಿನಿಯರ್‌ರನ್ನು ಹೊತ್ತೊಯ್ಯುತ್ತಿದ್ದ ವಾಹನ -ಕಿಶ್ತ್ವಾರ್ ರಾಷ್ಟಿçÃಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ ೧೦.೪೫ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭುವಿಂದರ್ ಕೊತ್ವಾಲ್ ಅವರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಪೂಂಚ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಷಾ, ಉಧಂಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿAಗ್ ಕಮಲ್ ಕಿಶೋರ್ ಶರ್ಮಾ ಮತ್ತು ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಅಪಘಾತದಲ್ಲಿ ಸೂಪರಿಂಟೆAಡಿAಗ್ ಇಂಜಿನಿಯರ್ ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್ - ೮ ಮಂದಿ ವಶಕ್ಕೆ

ಹೈದರಾಬಾದ್, ನ. ೧೪: ತೆಲಂಗಾಣದ ಹೈದರಾಬಾದ್‌ನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳ ಗುಂಪೊAದು ಕಾನೂನು ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿ ಧರ್ಮದ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಘಟನೆಗೆ ಸಂಬAಧಿಸಿದAತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿ ೮ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆAದು ತಿಳಿದುಬಂದಿದೆ. ಸಂತ್ರಸ್ತ ವಿದ್ಯಾರ್ಥಿ ಹೈದರಾಬಾದ್‌ನ ಐಎಫ್‌ಎಚ್‌ಇ ಸಂಸ್ಥೆಯಲ್ಲಿ ಪದವಿಪೂರ್ವ ಕಾನೂನು ಪದವಿ ಪಡೆಯುತ್ತಿದ್ದರು. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸೈಬರಾಬಾದ್ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬAಧಿಸಿದAತೆ ಅಪ್ರಾಪ್ತ ಬಾಲಕ ಸೇರಿ ೮ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

೨೫ ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ

ನವದೆಹಲಿ, ನ. ೧೪: ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗಾಗಿ ಭಾರತ ಸರ್ಕಾರ ನೀಡುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಅಚಂತ್ ಆಯ್ಕೆಯಾಗಿದ್ದಾರೆ. ರಾಷ್ಟçಪತಿ ದ್ರೌಪದಿ ಮುರ್ಮು ಅವರು ನವೆಂಬರ್ ೩೦ರಂದು ರಾಷ್ಟಿçÃಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಿದ್ದಾರೆ. ಕ್ರೀಡೆಯಲ್ಲಿನ ಅತ್ಯುತ್ತಮ ಸಾಧನೆಗಾಗಿ ೨೫ ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ತಿಳಿಸಿದೆ. ಚೆಸ್ ಆಟಗಾರ ಆರ್ ಪ್ರಜ್ಞಾನಂದ. ಒಡಿಶಾ ಹಾಕಿ ತಾರೆ ದೀಪ್ ಗ್ರೇಸ್ ಎಕ್ಕಾ. ಶಟ್ಲರ್‌ಗಳಾದ ಲಕ್ಷ್ಯ ಸೇನ್, ಎಚ್‌ಎಸ್ ಪ್ರಣಯ್, ಮಹಿಳಾ ಬಾಕ್ಸರ್ ನಿಖತ್ ಜರೀನ್, ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಅವಿನಾಶ್ ಸೇಬಲ್ ಸೇರಿದಂತೆ ಒಟ್ಟು ೨೫ ಕ್ರೀಡಾಪಟುಗಳು ಈ ವರ್ಷ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.