ಮಡಿಕೇರಿ, ನ. ೧೪: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್ಪೋರ್ಟಲ್ನ್ನು ಅನಾವರಣಗೊಳಿಸಲಾಗಿದೆ. ಈ ವೆಬ್ಪೋರ್ಟಲ್ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಳ್ಳಲಾಗಿದೆ. ಹೆಸರು ನೋಂದಾಯಿಸಿಕೊAಡಿರುವ ಕಂಪನಿಗಳಿAದ ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸುವುದರಿಂದ ಅಭ್ಯರ್ಥಿ ಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು hಣಣಠಿ://sಞiಟಟಛಿoಟಿಟಿeಛಿಣ.ಞಚಿushಚಿಟಞಚಿಡಿ.ಛಿomನಲ್ಲಿ ನೋಂದಾಯಿಸಿಕೊAಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಅಥವಾ ಕಚೇರಿಯ ಜಿಲ್ಲಾ ಸಂಯೋಜಕ ಎನ್.ಆರ್. ರವಿಕುಮಾರ್ ಅವರ ಮೊಬೈಲ್ ಸಂಖ್ಯೆ ೯೧೧೩೯೩೫೨೨೦ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.