ಕೊಡ್ಲಿಪೇಟೆ, ನ. ೧೫: ರಾಜ್ಯ ಸರ್ಕಾರದ ನೂತನ ಯೋಜನೆಯಾದ ವಿವೇಕ ಯೋಜನೆಯಡಿ ಕೊಡ್ಲಿಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿವೇಕ ಕೊಠಡಿ ನಿರ್ಮಾಣಕ್ಕೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಭೂಮಿಪೂಜೆ ನೆರವೇರಿಸಿದರು.

ಸರ್ಕಾರಿ ಪ್ರೌಢಶಾಲೆಗೆ ೫೦ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಮೂರು ಕೊಠಡಿಗಳ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಜಿ.ಪಂ. ಇಂಜಿನಿಯರಿAಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪಿ. ವೀರೇಂದ್ರ, ಇಂಜಿನಿಯರ್ ಸಲೀಂ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕೆಂಚೇಶ್ವರ್, ಗ್ರಾ.ಪಂ. ಸದಸ್ಯರುಗಳಾದ ಲಾವಣ್ಯ, ಅಶ್ವಿನಿ, ಮೋಕ್ಷಿಕ್‌ರಾಜ್, ದಾಕ್ಷಾಯಿಣಿ, ಪ್ರಮುಖರಾದ ಭಗವಾನ್, ನಾಗರಾಜ್, ಹರೀಶ್, ಇಂದ್ರೋಜಿರಾವ್, ನಾಗೇಶ್, ಮುಖ್ಯಶಿಕ್ಷಕಿ ಪ್ರೇಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.