ಕೂಡಿಗೆ, ನ. ೧೫: ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೆ ವ್ಯಾಪಾರ ಮಾಡುತ್ತಿದ್ದ ೫ ಅಂಗಡಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬೀಗ ಹಾಕಲಾಯಿತು.
ಗ್ರಾಮ ಪಂಚಾಯಿತಿ ಮಾಸಿಕ ಸಭೆಯ ತೀರ್ಮಾನದಂತೆ ಅಂಗಡಿ ಮಾಲೀಕರಿಗೆ ಈ ಹಿಂದೆ ನೋಟೀಸ್ ನೀಡಲಾಗಿತ್ತು. ಅದಕ್ಕೆ ಯಾವುದೇ ಸ್ಪಂದನ ದೊರೆಯದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಪಂಚಾಯಿತಿ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಅಧಿಕಾರಿಗಳ ತಂಡ ಪರವಾನಗಿ ಪಡೆದುಕೊಳ್ಳದ ಅಂಗಡಿಗಳಿಗೆ ಬೀಗ ಜಡಿಯಲಾಯಿತು.
ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಎನ್.ಎನ್. ಧರ್ಮಪ್ಪ, ಸದಸ್ಯರಾದ ಪ್ರದೀಪ್, ಶ್ರೀಕಾಂತ್, ಸರಿತಾ ಅಭಿವೃದ್ಧಿ ಅಧಿಕಾರಿ ಹೇಮಲತಾ, ಕಾರ್ಯದರ್ಶಿ ಕೆ.ಸಿ. ರವಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.