ಮಡಿಕೇರಿ: ಮಕ್ಕಳ ದಿನಾಚರಣೆಯ ಪ್ರಯುಕ್ತ ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಕ್ಕಳೊಂದಿಗೆ ಕಾಂಗ್ರೆಸ್ ಪ್ರಮುಖ ಡಾ. ಮಂತರ್ ಗೌಡ ಅವರು ಮಕ್ಕಳ ದಿನಾಚರಣೆಯನ್ನು ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಚರಿಸಿದರು.
ನಂತರ ಮಕ್ಕಳಿಗೆ ಸಿಹಿ ವಿತರಿಸಿ, ಮಕ್ಕಳೊಂದಿಗೆ ಬೆರೆತು ಮಕ್ಕಳ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭ ಮುಖಂಡರಾದ ತೆನ್ನೀರ ಮೈನಾ, ಪ್ರಕಾಶ್ ಆಚಾರ್ಯ, ದಿವ್ಯಾ, ಮುದ್ದುರಾಜು ಹಾಗೂ ಇತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.ಸೋಮವಾರಪೇಟೆ: ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಪೋಷಕರ ಪಾತ್ರವೂ ಮಹತ್ತರವಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಹೇಳಿದರು.
ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲೆಯ ವತಿಯಿಂದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಮಕ್ಕಳ ದಿನಾಚರಣೆ ಸಮಾರಂಭ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಯನ್ನು ಪ್ರದರ್ಶಿಸಲು ಶಾಲೆಗಳು ವಾರ್ಷಿಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪೋಷಕರಿಗೂ ತಮ್ಮ ಮಕ್ಕಳ ಪ್ರತಿಭೆಯನ್ನು ಕಣ್ತುಂಬಿಕೊಳ್ಳಲು ಅವಕಾಶವಾಗುತ್ತದೆ. ಶಿಕ್ಷಕರು ಕೂಡ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು. ಉತ್ತಮ ಪ್ರಜೆಯನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು. ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಪೋಷಕರು ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ನಡೆಸಿಕೊಟ್ಟರು. ವಿವಿಧ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಉಪಾಧ್ಯಕ್ಷೆ ಚಂದ್ರಿಕಾ ಕುಮಾರ್, ಕಾರ್ಯದರ್ಶಿ ಸಂಗೀತಾ ದಿನೇಶ್, ಭಾತ್ಮೀದಾರ ರಾದ ಕವಿತಾ ವಿರೂಪಾಕ್ಷ, ಖಜಾಂಚಿ ಲಾವಣ್ಯ ಮೋಹನ್, ಪದಾಧಿಕಾರಿಗಳಾದ ವೀಣಾ ಬೆಳ್ಳಿಯಪ್ಪ, ರಾಜೇಶ್ವರಿ, ಒಕ್ಕಲಿಗರ ಸಂಘದ ನಿರ್ದೇಶಕರಾದ ನಂದ ಕುಮಾರ್, ನಿರ್ಮಲ ಪ್ರಕಾಶ್, ಶಾಲಾ ಮುಖ್ಯಶಿಕ್ಷಕಿ ಬೀನಾ ಮೋಹನ್ ಇದ್ದರು.ಸೋಮವಾರಪೇಟೆ: ಸಮೀಪದ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಸಂತೆ ಕಾರ್ಯಕ್ರಮ ನಡೆಯಿತು.
ಶಾಲಾ ಆವರಣದಲ್ಲಿ ವಿವಿಧ ತರಕಾರಿ, ಹಣ್ಣು ಹಂಪಲು, ಸಿಹಿ ತಿಂಡಿಗ ಳನ್ನು ವಿದ್ಯಾರ್ಥಿಗಳು ತಂದು ವ್ಯಾಪಾರ ಮಾಡಿದರು. ಪೋಷಕರು ಹಾಗೂ ಶಿಕ್ಷಕರು ಸೇರಿದಂತೆ ಸಾರ್ವಜನಿಕರು ಸಂತೆಯಲ್ಲಿ ಖರೀದಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಇದರೊಂದಿಗೆ ವಿದ್ಯಾರ್ಥಿ ಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕೆ.ಆರ್. ಸತೀಶ್, ಶಾಲೆ ನಿರ್ಮಿಸಲು ಸ್ಥಳ ದಾನ ಮಾಡಿದ ಶಾಂತಪ್ಪ, ಮುಖ್ಯ ಶಿಕ್ಷಕಿ ಸಿ.ಆರ್. ತಂಗಮ್ಮ, ಸಹ ಶಿಕ್ಷಕರಾದ ಆಶಾ, ಅಬಿದಾಭಾನು, ಮೋಹನಕುಮಾರಿ, ಸವಿತಾ, ಶಿವಶಂಕರ್ ಇದ್ದರು.ಕೂಡಿಗೆ: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮುಳ್ಳುಸೋಗೆ ಶಾಲಾ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮದ ನಿಮಿತ್ತ ಅಗಮಿಸಿದ್ದ ವೇಳೆ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಅಂಗವಾಗಿ ಸಿಹಿ ವಿತರಣೆ ಮಾಡಿದರು. ನಂತರ ಪುಟಾಣಿ ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡರು.
ಈ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷೆ ಸೇರಿದಂತೆ ಸದಸ್ಯರು, ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು ಹಾಗೂ ಅಂಗನವಾಡಿ ಮಕ್ಕಳ ಪೋಷಕರು ಹಾಜರಿದ್ದರು.ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಏಳನೇ ತರಗತಿಯ ವಿದ್ಯಾರ್ಥಿ ಕಿರಣ್ ಕೆ.ಆರ್. ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿ ಸೋಮಯ್ಯ, ನಿತ್ಯ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಂದ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.