ಮಡಿಕೇರಿ, ನ. ೧೫ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ಇನ್ಸ್ಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ೬೯ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಶಿಕ್ಷಣ, ವೃತ್ತಿಪರ ನಿರ್ವಹಣೆಯನ್ನು ಮುಖ್ಯ ವಾಹಿನಿಗೆ ತರಲು ಪುನರ್ ನಿರ್ಮಿಸುವ ದಿನಾಚರಣೆ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನಿಂದ ಆಯ್ಕೆಗೊಂಡ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತಾ. ೧೬ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಹೊಟೇಲ್ ರಾಜ್‌ದರ್ಶನ್‌ನಲ್ಲಿ ನಡೆಯಲಿದೆ.

ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಎಂ.ಪಿ. ಸುಜಾ ಕುಶಾಲಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎ.ಕೆ. ಮನುಮುತ್ತಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.