ಕುಶಾಲನಗರ, ನ. ೧೫: ಕುಶಾಲನಗರದ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ಎಂಬ ಸ್ಪರ್ಧೆಯನ್ನು ನಡೆಸಲಾಯಿತು.
ಆಟ ಪಾಠದೊಂದಿಗೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಮೂಡಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ನಡೆಸಲಾಗಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಮುಖರು ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲೆ ಲಿಖಿತ ಹಾಗೂ ಉಪನ್ಯಾಸಕಿ ಬಿಂದುಶ್ರೀ ಹಾಗೂ ಮಹೇಶ್ ಸ್ಪರ್ಧೆಯ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.