ಮಡಿಕೇರಿ, ನ. ೧೫: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಆಶಾ ಫಾರ್‌ಎಜುಕೇಶನ್ ಯು.ಎಸ್.ಎ. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸರ್ಕಾರಿ ಪದವಿ ಪೂರ್ವಕಾಲೇಜು, ಪ್ರೌಢಶಾಲೆ ವಿಭಾಗದಲ್ಲಿ ವಿಜ್ಞಾನ ವಾಹಿನಿ- ಸಂಚಾರಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಸಾದ್‌ಗೌಡ ಉದ್ಘಾಟಿಸಿದರು.

ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ|| ಕುಮಾರ್ ಜಿ.ಎಸ್. ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವಂತೆ ವಿಜ್ಞಾನದ ವಿಷಯವನ್ನು ಪಾಯೋಗಿಕವಾಗಿ ಮಾಡುವುದರಿಂದ ವಿದಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚುವುದರ ಜೊತೆಗೆ ಕಲಿಕಾ ಆಸಕ್ತಿಯೂ ಹೆಚ್ಚಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಯೋಜನಾ ಉಪ ಸಮನ್ವಯಾಧಿಕಾರಿ ಕೃಷ್ಣಪ್ಪ ಎಂ. ಮಾತನಾಡಿ, ಸಂಚಾರಿ ವಿಜ್ಞಾನ ಪ್ರಯೋಗಾಲಯದ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಪಡೆದುಕೊಳ್ಳುವಂತಾಗಬೇಕೆAದÀರು.

ಶಾಲಾ ನಾಯಕಿ ನಂದಿನಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ವಿಷಯದ ಕುರಿತು ಪಾಯೋಗಿಕವಾಗಿ ಕಲಿಯಲು ನಮಗೆ ಪ್ರಯೋಗಾಲಯದ ಕೊರತೆಯಿದ್ದು ಇದೀಗ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ನ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸಂಚಾರಿ ವಿಜ್ಞಾನ ಪ್ರಯೋಗಾಲಯವನ್ನು ಆರಂಭಿಸಿರುವುದು ಸಂತಸ ತಂದಿದೆ ಎಂದರು. ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ|| ಚಂದ್ರಶೇಖರ್ ಕೆ.ಎನ್. ವಹಿಸಿದ್ದರು.

ಮಡಿಕೇರಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ಪದವಿ ಪೂರ್ವ ಕಾಲೇಜು - ಪ್ರೌಢಶಾಲೆ ವಿಭಾಗದ ಹಿರಿಯ ಶಿಕ್ಷಕಿ ಸೌಮ್ಯಲತಾ, ವಿದ್ಯಾರ್ಥಿಗಳು, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರವೀಣ್ ಕುಮಾರ್ ಎಸ್., ರೋಟರಿ ವಲಯ ೬ ಜಿಲ್ಲೆ ೩೧೮೧ನ ಅಸಿಸ್ಟೆಂಟ್ ಗವರ್ನರ್ ರತನ್ ತಮ್ಮಯ್ಯ, ರೋಟರಿ ವಲಯ ೬ ಜಿಲ್ಲೆ ೩೧೮೧ ನ ವಲಯ ಸೇನಾನಿ ಎನ್.ಡಿ. ಅಚ್ಚಯ್ಯ, ಮಡಿಕೇರಿ ಸರ್ಕಾರಿ ಪದವಿ ಪೂರ್ವಕಾಲೇಜು, ಪ್ರೌಢಶಾಲೆ ಅಭಿವೃದ್ಧಿ ಸಮಿತಿ ವಿಭಾಗದ ಅಧ್ಯಕ್ಷ ಚಂದ್ರಶೇಖರ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಅಂಕಾಚಾರಿ, ಅವಿತ್ ಆನಂದ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.