ಮಡಿಕೇರಿ, ನ. ೧೫: ಪ್ರಸಕ್ತ ಸಾಲಿಗೆ ೧ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವೆಬ್‌ಸೈಟ್ ವಿಳಾಸ hಣಣಠಿs://ssಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ ೩೧ ಕೊನೆಯ ದಿನವಾಗಿದೆ. ಕುಟುಂಬದ ವಾರ್ಷಿಕ ಆದಾಯ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿ ವೇತನಕ್ಕೆ ರೂ. ೨.೫೦ ಲಕ್ಷ ಮತ್ತು ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಪ್ರವರ್ಗ-೧ ವಿದ್ಯಾರ್ಥಿಗಳಿಗೆ ರೂ. ೧ ಲಕ್ಷ, ಪ್ರವರ್ಗ-೨ಎ, ೩ಎ, ೩ಬಿ, ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರೂ. ೪೪,೫೦೦ ಆಗಿರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.