ಚೆಯ್ಯಂಡಾಣೆ, ನ. ೧೫: ಕಡಂಗದ ಅರಪಟ್ಟು ಲೋಪಮುದ್ರ ೨೦ ಸಂಸ್ಥೆ ವತಿಯಿಂದ ದ್ವಿತೀಯ ವರ್ಷದ ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ವರ್ಧೆಯು ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾ. ೨೦ರಂದು ನಡೆಯಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ತಿಳಿಸಿದ್ದಾರೆ.

ಕಡಂಗ ಅರಪಟ್ಟುವಿನ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ೦.೨೨ ರೈಫಲ್ ೫೦ ಮೀಟರ್ ರೇಂಜ್, ಎರಡನೇ ವಿಭಾಗ ೧೨ ಬೋರ್ ೩೦ ಮೀಟರ್ ರೇಂಜ್ ಸ್ಪರ್ಧೆ ನಡೆಯಲಿದೆ ಎಂದರು.

ಮೊದಲನೇಯ ವಿಭಾಗದಲ್ಲಿ ವಿಜೇತರಾದವರಿಗೆ ಪ್ರಥಮ ೩೦ ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ೨೦ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ೧೦ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ಎರಡನೇ ವಿಭಾಗದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ೨೦ ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ೧೫ ಸಾವಿರ ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ೧೦ ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು.

ಸಂಜೆ ಸಂಸ್ಥೆಯ ಅಧ್ಯಕ್ಷ ಮೇದುರ ಗಣು ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಲೋಪಮುದ್ರ ಟೀಮ್ ೨೦ ಸಂಸ್ಥೆಯ ಕಾರ್ಯದರ್ಶಿ ಮಾತಂಡ ಧೀರಜ್ ಚಂಗಪ್ಪ, ಕೋಶಾಧಿಕಾರಿ ಕೂತಂಡ ನವೀನ್ ಕಾರ್ಯಪ್ಪ, ಸಹ ಕಾರ್ಯದರ್ಶಿ ಕೋಡಿರ ಪ್ರದೀಪ್ ಕುಟ್ಟಪ್ಪ ಉಪಸ್ಥಿತರಿದ್ದರು.