ಕೂಡಿಗೆ, ನ. ೧೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದ ಕಬ್ಬಿಣದ ರಾಡುಗಳು ಮತ್ತು ಅದಕ್ಕೆ ಸಂಬAಧಿಸಿದ ಕಾಂಕ್ರಿಟ್ ಮೆಟ್ಟಿಲುಗಳು ಹಾಳಾಗಿದ್ದು, ಅದರ ದುರಸ್ತಿಗೆ ಅನುದಾನ ನೀಡುವುದಾಗಿ ಶಾಸಕ ಅಪ್ಪಚ್ಚು ರಂಜನ್ ಭರವಸೆ ನೀಡಿದ್ದಾರೆ.

ತೊರೆನೂರು ಗ್ರಾಮದಲ್ಲಿ ನಡೆದ ಶಾಲಾ ಕಟ್ಟಡ ಭೂಮಿ ಪೂಜೆಯ ಸಂದರ್ಭ ಮಾತನಾಡಿದ ಅವರು, ತೂಗು ಸೇತುವೆಯ ದುರಸ್ತಿ ಸಂಬAಧ ತಂತ್ರಜ್ಞಾನದ ಅನುಭವ ಇರುವ ವ್ಯಕ್ತಿಗಳನ್ನು ಕರೆಸಿ ಪರಿಶೀಲನೆ ನಡೆಸಿ ದುರಸ್ತಿ ಕಾರ್ಯವನ್ನು ಕೈಗೊಳಲಾಗುವುದು ಎಂದು ಹೇಳಿದರು.

ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್, ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾ ಶಂಕರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್ ಉಪಾಧ್ಯಕ್ಷ ಬೇಬಿಯಣ್ಣ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಟಿ.ಕೆ. ಪಾಂಡುರAಗ, ಸಹಕಾರ ಸಂಘ ಸದಸ್ಯರಾದ ದೇವರಾಜ್, ಶಿವಕುಮಾರ್, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಗಿರೀಶ್, ಸಹಕಾರ ಸಂಘದ ಮಾಜಿ ಸದಸ್ಯರಾದ ಮಂಜಯ್ಯ, ಕೃಷ್ಣ ಸೇರಿದಂತೆ ಗ್ರಾಮದ ಪ್ರಮುಖರು ಹಾಜರಿದ್ದರು.