ಸೋಮವಾರಪೇಟೆ, ನ. ೧೫: ಪುಷ್ಪಗಿರಿ ಜೇಸಿ ಸಂಸ್ಥೆ ವತಿಯಿಂದ ಪಟ್ಟಣದ ಅಟಲ್ ಜೀ ಕನ್ನಡ ಭವನದಲ್ಲಿ ಆಯೋಜಿಸಿರುವ ಜೇಸಿ ಸಪ್ತಾಹ ೨೦೨೨ - ಒಂದು ವಾರದ ವಿವಿಧ ಕಾರ್ಯಕ್ರಮಗಳಿಗೆ ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜಾ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಯನ್ನು ಗುರುತಿಸಿ ಪ್ರೋತ್ಸಾಹಿಸಲು ಜೇಸೀ ಇಂತಹ ಸ್ಪರ್ಧಾ ಕಾರ್ಯಕ್ರಮಗಳನ್ನು ಪ್ರತಿವರ್ಷ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಜೇಸಿ ಹಿರಿಯ ವಲಯಾಧ್ಯಕ್ಷ ಕುಮಾರ್, ಜೇಸಿ ಸಂಸ್ಥೆ ಅಧ್ಯಕ್ಷ ನೆಲ್ಸನ್ ಡಿಸೋಜ, ಪ್ರಧಾನ ಕಾರ್ಯದರ್ಶಿ ರಾಜೇಶ್, ಮಹಿಳಾ ಘಟಕದ ಅಧ್ಯಕ್ಷೆ ಜಗದಾಂಭ, ನಿಕಟಪೂರ್ವ ಅಧ್ಯಕ್ಷೆ ಮಾಯಾ ಗಿರೀಶ್, ಮುಂದಿನ ಸಾಲಿನ ಅಧ್ಯಕ್ಷೆ ಎಂ.ಎ. ರುಬೀನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯು.ಕೆ.ಜಿ.ಯಿಂದ ೧೦ನೇ ತರಗತಿವರೆಗಿನ ಮಕ್ಕಳಿಗೆ ಮೂರು ವಿಭಾಗಗಳಲ್ಲಿ ನಡೆದ ಛದ್ಮವೇಷ ಸ್ವರ್ಧೆಯಲ್ಲಿ ಹಲವು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.