ಕುಶಾಲನಗರ, ನ. ೧೫: ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೇರ್ಪಡೆ ಮಾರ್ಪಾಡು ಯೋಜನೆಯಡಿ ರೂ. ೧೫.೭೫ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಕೊಠಡಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಸರ್ಕಾರ ವಿಶೇಷ ಒತ್ತು ನೀಡಿದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭ ಉಪಸ್ಥಿತರಿದ್ದ ಪ.ಪಂ. ಅಧ್ಯಕ್ಷ ಬಿ. ಜೈವರ್ಧನ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಫಲಿತಾಂಶ ತಂದು ಶಾಲೆಗೆ ಹಾಗೂ ಪೋಷಕÀರಿಗೆ ಕೀರ್ತಿ ತರಬೇಕು ಎಂದರು. ಈ ಸಂದರ್ಭ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಮುಖ್ಯ ಶಿಕ್ಷಕಿ ಪುಷ್ಪಾ ಹಾಗೂ ಶಿಕ್ಷಕರು ಇದ್ದರು.