ಮಡಿಕೇರಿ, ನ. ೧೫: ಸಂಪಾಜೆ ಹೋಬಳಿ ಬಿಳಿಗೇರಿ ಗ್ರಾಮದ ಶ್ರೀ ಭಗವತಿ ಯುವಕ ಸಂಘದ ಕಟ್ಟಡದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ನಡೆಯಿತು. ಒಟ್ಟು ೧೨ ಅರ್ಜಿಗಳು ಸ್ವೀಕೃತವಾಗಿರುತ್ತವೆ.
ಪೊನ್ನಂಪೇಟೆ ತಾಲೂಕು ಪೊನ್ನಂಪೇಟೆ ಹೋಬಳಿಯ ಕಿರುಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಂಬAಧಿಸಿದAತೆ ಪೌತಿ ಖಾತೆ ಆಂದೋಲನ ನಡೆಯಿತು. ಹಾಗೆಯೇ ವೀರಾಜಪೇಟೆ ತಾಲೂಕು ಆರ್ಜಿ ಗ್ರಾಮದಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು. ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.