*ಗೋಣಿಕೊಪ್ಪ, ನ. ೧೫: ತಿತಿಮತಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ರೂ. ೧೬.೪೦ ಲಕ್ಷ ಅನುದಾನದ ವಿವೇಕ ಶಾಲಾ ಕೊಠಡಿ ಕಾಮಗಾರಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.
ಭೂಮಿಗೆ ಪುಷ್ಪಾರ್ಚನೆ ಹಾಗೂ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡುವ ಮೂಲಕ ಭೂಮಿಪೂಜೆ ನೆರವೇರಿಸಿದರು.
ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೇದಮೂರ್ತಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ, ಜಿ.ಪಂ. ಹಿರಿಯ ಇಂಜಿನಿಯರ್ ನಾಗೇಂದ್ರಪ್ಪ, ತಾಲೂಕು ಇಂಜಿನಿಯರ್ ಮಹದೇವ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಜಗದೀಶ್, ಶಕ್ತಿ ಕೇಂದ್ರದ ಪ್ರಮುಖ ಎನ್.ಎನ್ ಅನುಪ್ ಕುಮಾರ್, ಗ್ರಾ.ಪಂ. ಉಪಾಧ್ಯಕ್ಷೆ ವಿಜಯ, ಸದಸ್ಯರುಗಳಾದ ಶ್ಯಾಮಲ, ಶಂಕರ, ವಿ.ಎಸ್.ಎಸ್.ಎನ್. ನಿರ್ದೇಶಕಿ ಮಂಜುಳ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು ಇದ್ದರು.
- ಎನ್.ಎನ್. ದಿನೇಶ್