*ಗೋಣಿಕೊಪ್ಪ, ನ. ೧೬: ವಿಶ್ವ ಮಧುಮೇಹ ದಿನದ ಅಂಗವಾಗಿ ಬಿಳುಗುಂದ ಆರೋಗ್ಯ ಹಾಗೂ ಕ್ಷೇಮ ಕೇಂದ್ರದ ವ್ಯಾಪ್ತಿಯ ಹೊಸಕೋಟೆ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಸಮುದಾಯ ಆರೋಗ್ಯ ಅಧಿಕಾರಿ ಡಿಂಪಲ್ ಕೆ.ಓ. ಜೀವನ ಶೈಲಿಯ ಬದಲಾವಣೆ ಹಾಗೂ ಆಹಾರ ಸೇವನೆ ಬಗ್ಗೆ ಮಾಹಿತಿಯನ್ನು ನೀಡಿದರು. ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಇದ್ದರು.