ಮಡಿಕೇರಿ, ನ.೧೬ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ೩೨ನೇ ವರ್ಷದ ‘ಕೊಡವ ನ್ಯಾಷನಲ್ ಡೇ’ ತಾ.೨೬ ರಂದು ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ನಲ್ಲಿ ಬೆಳಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ವಿಶ್ವ ವಿಖ್ಯಾತ ಅರ್ಥಶಾಸ್ತçಜ್ಞ ಹಾಗೂ ಕೇಂದ್ರ ಕಾನೂನು ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ವಿರಾಟ್ ಹಿಂದೂಸ್ತಾನ್ ಸಂಗಮ್ (ವಿಹೆಚ್ಎಸ್) ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ಕೊಡವ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಅನ್ವೇಷಣೆ ಹಾಗೂ ಕೊಡವ ಜನಾಂಗದ ಆಂತರಿಕ ರಾಜಕೀಯ ಸ್ವಯಂ ನಿರ್ಧಾರದ ಹಕ್ಕು ಮತ್ತು ಜಾಗತಿಕ ರಾಜಕಾರಣ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ‘ಕೊಡವ ನ್ಯಾಷನಲ್ ಡೇ’ ಕಾರ್ಯಕ್ರಮದಲ್ಲಿ ಕೊಡವರ ಹಿತಾಸಕ್ತಿ ಕಾಪಾಡುವ ಮಹತ್ವದ ಹಕ್ಕೊತ್ತಾಯ ಮತ್ತು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಲಾಗುವುದು ಎಂದು ತಿಳಿಸಿದ್ದಾರೆ.