ಸೋಮವಾರಪೇಟೆ, ನ. ೧೬: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಯ ಗುಣಮಟ್ಟವನ್ನು ಹೆಚ್ಚಿಸುವ ಸಂಬAಧ ವಿವೇಕ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಮಡಿಕೇರಿ ವಿಧಾನ ಸಭಾ ಕ್ಷೇತ್ರಕ್ಕೆ ರೂ. ೪ ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶಾಲಾ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ, ನಂತರ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ದಿಸೆಯಲ್ಲಿ ರಾಜ್ಯಾದ್ಯಂತ ಸುಮಾರು ೮೧೦೦ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಏಕಕಾಲದಲ್ಲಿ ಚಾಲನೆ ನೀಡಿದೆ. ಆ ಪ್ರಯುಕ್ತ ಕ್ಷೇತ್ರಕ್ಕೆ ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಸೋಮವಾರಪೇಟೆ ತಾಲೂಕಿನಲ್ಲಿ ಸುಮಾರು ೧೫ ಶಾಲೆಗಳಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ರಂಜನ್ ತಿಳಿಸಿದರು.

ರಾಜ್ಯ ಸರ್ಕಾರದ ಮೂಲ ಉದ್ದೇಶ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿದೆ. ಮಕ್ಕಳ ಕಲಿಕೆಗೆ ಸೋಮವಾರಪೇಟೆ ತಾಲೂಕಿನಲ್ಲಿ ಸುಮಾರು ೧೫ ಶಾಲೆಗಳಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ರಂಜನ್ ತಿಳಿಸಿದರು.

ರಾಜ್ಯ ಸರ್ಕಾರದ ಮೂಲ ಉದ್ದೇಶ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿದೆ. ಮಕ್ಕಳ ಕಲಿಕೆಗೆ ಯೋಜನೆ ಜಾರಿಗೆ ತಂದಿದೆ ಎಂದರು. ಇದೇ ಸಂದರ್ಭ ಶಾಲಾ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಮಕ್ಕಳ ದಿನಾಚರಣೆಯಲ್ಲಿ ಶಾಸಕರು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಅಣ್ಣಮ್ಮ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಸೇರಿದಂತೆ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.