ಮಡಿಕೇರಿ, ನ. ೧೬: ಮೈಸೂರು ಜಿಲ್ಲಾ ಮಾಸ್ರ‍್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ ಮೈಸೂರು ಯೂನಿವರ್ಸಿಟಿಯ ಓವಲ್ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ೩೫ ವರ್ಷ ಮೇಲ್ಪಟ್ಟ ಮಹಿಳೆಯರ ವಿಭಾಗದ ಜಾವೆಲಿನ್ ಎಸೆತ, ಡಿಸ್ಕಸ್ ಎಸೆತದಲ್ಲಿ ಕಾರುಗುಂದ ಗ್ರಾಮದ ಬಾಡನ ಡೈಸಿ ಲೋಕೇಶ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.