*ಗೋಣಿಕೊಪ್ಪ, ನ. ೧೬: ಕಾನೂನು ನೆರವು ಮತ್ತು ಅರಿವಿನ ಬಗ್ಗೆ ಮಾಹಿತಿಗಳನ್ನು ಪೊನ್ನಂಪೇಟೆ ನ್ಯಾಯಾಲಯದ ನ್ಯಾಯಾಧೀಶೆ ಕೆ.ಎಸ್. ಆಶಾ ನೀಡಿದರು. ಗೋಣಿಕೊಪ್ಪ ಮಹಿಳಾ ಸಮಾಜದಲ್ಲಿ ಕಾರ್ಯಕ್ರಮ ನಡೆಯಿತು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೀತ, ದೈಹಿಕ ಶಿಕ್ಷಣ ಪರಿಕ್ಷಕಿ ಗಾಯತ್ರಿ, ಪಂಚಾಯಿತಿ ಪ್ರಬಾರ ಯೋಜನಾಧಿಕಾರಿ ರವಿ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಚೈತ್ರ ಬಿ. ಚೇತನ್, ಗ್ರಾ.ಪಂ. ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಸ್ವಸಹಾಯ ಸಂಘ, ಸಂಜೀವಿನಿ ಸಂಘ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.