ವೀರಾಜಪೇಟೆ, ನ.೧೬: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ವೀರಾಜಪೇಟೆಯ ಸೈಂಟ್ ಆನ್ಸ್ ಪದವಿ ಪೂರ್ವ ಕಾಲೇಜಿನ ಉಮರ್ ಅಬ್ದುಲ್ಲಾ, ಅರಮೇರಿಯ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಮುಹಮ್ಮದ್ ಶಹೀದ್ ಹಾಗೂ ಪ್ರಜ್ವಲ್, ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಸ್ಕೂಲ್ ಕಾಲೇಜಿನ ಅಮೋಘ, ಮಾದಾಪುರದ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ಗಗನ್ ಪಾಲ್ಗೊಳ್ಳುತ್ತಿದ್ದಾರೆ. ಪಂದ್ಯಾವಳಿಗಳು ತಾ. ೧೭ ಹಾಗೂ ೧೮ರಂದು ನಡೆಯಲಿದೆ. ತರಬೇತುದಾರರಾಗಿ ವೀರಾಜಪೇಟೆ ಸೈಂಟ್ ಆನ್ಸ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಾಜಾ ರೈ, ಗೋಣಿಕೊಪ್ಪದ ಪ್ರೇಮ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.