ಸೋಮವಾರಪೇಟೆ, ನ. ೧೮: ಭಾಷೆಯ ಬಳಕೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಅರೆಭಾಷೆ ಗೌಡ ಜನಾಂಗದ ಆಚಾರ ವಿಚಾರ ಉಳಿಯಬೇಕಾದರೆ, ಮೊದಲು ನಮ್ಮ ಭಾಷೆಯನ್ನು ಬಳಸಿ ಸಂಸ್ಕೃತಿಯನ್ನು ಉಳಿಸಬೇಕಾಗಿದೆ ಎಂದು ಕರ್ನಾಟಕ ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಹೇಳಿದರು.
ತಾಲೂಕಿನ ಐಗೂರು ಅರೆಭಾಷೆ ಗೌಡ ಸಮಾಜದ ವತಿಯಿಂದ, ಯಡವಾರೆ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಕೈಲ್ ಮುಹೂರ್ತ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಳೆದ ಕೆಲವು ವರ್ಷಗಳಿಂದ ಸ್ಥಳೀಯ ಸಮಾಜ ನಮ್ಮ ಕಲೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಸಮಾಜದ ಪ್ರಮುಖರಾದ ಕೊಡಗನ ಹರ್ಷ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ನಮ್ಮ ಸಮಾಜದ ಕಲೆ ಸಂಸ್ಕೃತಿ ಉಳಿಸಿ ಬೆಳೆಸಲು ಸಹಕಾರಿಯಾಗಲಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಗೂರು ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಕಡ್ಲೇರ ಹೊನ್ನಪ್ಪ ವಹಿಸಿದ್ದರು. ಸಮಾಜ ಬಾಂಧವರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಯನ್ನು ಕಾಫಿ ಬೆಳೆಗಾರ ಬಾರನ ಅಪ್ಪಾಜಿ ಉದ್ಘಾಟಿಸಿದರು. ಸಮಾರಂಭದಲ್ಲಿ ಸಮಾಜದ ಪ್ರಮುಖರಾದ ವಹಿಸಿದ್ದರು. ಸಮಾಜ ಬಾಂಧವರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಯನ್ನು ಕಾಫಿ ಬೆಳೆಗಾರ ಬಾರನ ಅಪ್ಪಾಜಿ ಉದ್ಘಾಟಿಸಿದರು. ಸಮಾರಂಭದಲ್ಲಿ ಸಮಾಜದ ಪ್ರಮುಖರಾದ