ವೀರಾಜಪೇಟೆ, ನ. ೧೭: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಪತ್ರಿಕಾ ಧರ್ಮವನ್ನು ಎತ್ತಿ ಹಿಡಿಯುವ ಮೂಲಕ ಜನರ ನಂಬಿಕೆ ಹಾಗೂ ವಿಶ್ವಾಸಾರ್ಹತೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ವೀರಾಜಪೇಟೆ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಪತ್ರಕರ್ತರ ಸಂಘದ ವೀರಾಜಪೇಟೆ ತಾಲೂಕು ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವ ಯಶಸ್ವಿಯಾಗಲು, ಸಮಾಜದಲ್ಲಿ ಬದಲಾವಣೆ ತರಲು ಹಾಗೂ ಸಂವಿಧಾನದ ಆಶಯಗಳು ಈಡೇರಲು ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕೋದ್ಯಮ ಅತ್ಯಂತ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.
ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪತ್ರಕರ್ತರು ಸತ್ಯವನ್ನು ಅಪಪ್ರಚಾರ ಮಾಡದೆ ಸತ್ಯದ ಪರವಾಗಿ ವೃತ್ತಿಪರತೆ ಮೆರೆಯಬೇಕು. ಹಿಂದಿನ ಪತ್ರಿಕೋದ್ಯಮ ಶ್ರಮ ಮತ್ತು ತಾಳ್ಮೆಯ ಆಧಾರಿತವಾಗಿತ್ತು. ಆದರೆ ಇಂದಿನ ತಂತ್ರಜ್ಞಾನ ಪತ್ರಕರ್ತರ ಶ್ರಮವನ್ನು ಮೊಟಕುಗೊಳಿಸಿದೆ. ಸುಂಟರಗಾಳಿಯAತೆ ಇಲ್ಲದೆ ತಂಗಾಳಿಯAತೆ ಎಲ್ಲರಲ್ಲೂ ವಿಶ್ವಾಸ ತುಂಬುವ ಕೆಲಸ ಪತ್ರಕರ್ತರಿಂದ ಆಗಬೇಕಿದೆ ಎಂದ ಅವರು ನೂತನ ತಾಲೂಕು ಸಂಘಕ್ಕೆ ಶುಭ ಹಾರೈಸಿ ಆಶೀರ್ವಚನ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗದ ಜವಾಬ್ದಾರಿ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಸರಕಾರದ ವೈಫಲ್ಯಗಳನ್ನು ಟೀಕೆ ಟಿಪ್ಪಣಿ ಮಾಡುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಪ್ರಾಮಾಣಿಕ ಪತ್ರಿಕೋದ್ಯಮದಿಂದ ಮಾತ್ರ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.
ಜೆಡಿಎಸ್ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ, ಸಮಾಜದ ಹಿತದೃಷ್ಟಿಯನ್ನು ಬಯಸುವ ಪತ್ರಕರ್ತರಿಗೆ ಇಂದು ಸೂಕ್ತ ಭದ್ರತೆ ಹಾಗೂ ಮೂಲ ಸೌಕರ್ಯದ ಕೊರತೆ ಇದೆ. ಸರಕಾರ ಗ್ರಾಮೀಣ ಪತ್ರಕರ್ತರ ಜೀವನ ಮಟ್ಟದ ಸುಧಾರಣೆ ಕಡೆಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.
ನೂತನ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಸಮಾಜದಲ್ಲಿ ಬದಲಾವಣೆ ತರುವ ಸದುದ್ದೇಶದಿಂದ ತಾಲೂಕು ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದು, ಎಲ್ಲರ ವಿಶ್ವಾಸವನ್ನು ಉಳಿಕೊಳ್ಳುವ ಭರವಸೆಯ ಮಾತುಗಳನ್ನಾಡಿದರು.
ಜಿಲ್ಲಾಧ್ಯಕ್ಷ ಮುರಳಿಧರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಪತ್ರಿಕೋದ್ಯಮ ತನ್ನದೇಯಾದ ಇತಿಹಾಸವನ್ನು ಹೊಂದಿದೆ. ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಇಲ್ಲಿನ ಹಲವಾರು ಸ್ಥಳೀಯ ಪತ್ರಿಕೆಗಳು ಇಂದಿಗೂ ಜನತೆಯಲ್ಲಿ ತಮ್ಮ ವಿಶ್ವಾಸವನ್ನು ಉಳಿಸಿಕೊಂಡಿವೆ ಎಂದರು.
ಇದೇ ಸಂದರ್ಭ ರಾಷ್ಟçಮತ ಪತ್ರಿಕೆಯ ಹಿರಿಯ ಸಂಪಾದಕಿ ಜಯಲಕ್ಷಿ÷್ಮ ಗೋವಿಂದ ರಾವ್, ರಾಷ್ಟçಬಂಧು ಪತ್ರಿಕೆಯ ಸಂಪಾದಕ ಅರುಣ್ ರಾವ್, ತೂಕ್ ಬೊಳಕ್ ಪತ್ರಿಕೆಯ
(ಮೊದಲ ಪುಟದಿಂದ) ಸಂಪಾದಕ ಮಲ್ಲೇಂಗಡ ಶಂಕರಿ ಪೊನ್ನಪ್ಪ ಹಾಗೂ ಪೂಮಾಲೆ ಪತ್ರಿಕೆಯ ಸಂಪಾದಕ ಅಜ್ಜನಿಕಂಡ ಮಹೇಶ್ ನಾಚಯ್ಯ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರಳೀಧರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಘದ ನಿರ್ದೇಶಕ ಹೇಮಂತ್ ತೋರೆರ ನಿರೂಪಣೆ ಮಾಡಿದರೆ. ಪ್ರಧಾನ ಕಾರ್ಯದರ್ಶಿ ಉಷಾಪ್ರೀತಂ ಸ್ವಾಗತಿಸಿ ಖಜಾಂಚಿ ಮೋಹನ್ ರಾಜ್ ವಂದಿಸಿದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಪುರಸಭೆ ಅಧ್ಯಕ್ಷೆ ಟಿ.ಆರ್.ಸುಶ್ಮಿತ, ವೀರಾಜಪೇಟೆ ಮಹಿಳಾ ಸಮಾಜದ ಅಧ್ಯಕ್ಷೆ ಗೀತಾ ಬೆಳ್ಯಪ್ಪ, ಹಾಗೂ ಕೊಡಗು ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.