ಚೆಟ್ಟಳ್ಳಿ, ನ. ೧೭: ವಾಲ್ನೂರು ತ್ಯಾಗತ್ತೂರು ಗ್ರಾಮದಲ್ಲಿ ನಡೆದ ಬಿ.ಜೆ.ಪಿ. ಕಾರ್ಯಕರ್ತರ ಸಭೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಭುವನೇಂದ್ರ ಅವರು ತಮ್ಮ ೨೦೦ ಜನ ಬೆಂಬಲಿಗರೊAದಿಗೆ ಬಿಜೆಪಿಗೆ ಸೇರ್ಪಡೆಯಾದರು. ಈ ಸಂದರ್ಭ ಶಾಸಕ ಅಪ್ಪಚ್ಚು ರಂಜನ್ ಅವರು ಶಾಲು ಹೊದಿಸಿ ಪಕ್ಷದ ಬಾವುಟ ವನ್ನು ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿದರು.
ಈ ಸಂದÀರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ವಿ.ಕೆ. ಲೋಕೇಶ್, ಸೋಮವಾರಪೇಟೆ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ವಾಲ್ನೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ, ಸದಸ್ಯ ಮನು ಮಹೇಶ್ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.